ಹಾಸನ: ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾಡಳಿತದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನದಲ್ಲಿ ಹಾಸನ ನಗರದ ಶ್ರೀಮತಿ ಹೆಚ್. ಎಸ್.ಪ್ರತಿಮಾ ಹಾಸನ್ ರವರು ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗಮನಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಇವರು ಸಮಾಜ ಕ್ಷೇತ್ರದಲ್ಲಿ ಮಾತ್ರವಲ್ಲದೆ ಸಾಹಿತಿಯಾಗಿ, ಶಿಕ್ಷಕಿಯಾಗಿ, ಪತ್ರಕರ್ತೆಯಾಗಿ, ಸಾಮಾಜಿಕ ಚಿಂತಕಿಯಾಗಿ, ಗಾಯಕಿಯಾಗಿ, ಚಿತ್ರಗಾರ್ತಿ, ನೃತ್ಯಗಾರ್ತಿ, ಹೀಗೆ ಹಲವಾರು ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದ್ದಾರೆ.
ಹಲವಾರು ಸಂಘ-ಸಂಸ್ಥೆಗಳಿಂದ ಹಲವಾರು ರಾಜ್ಯ ಮತ್ತು ರಾಷ್ಟ್ರೀಯ ಪ್ರಶಸ್ತಿಯನ್ನು ಶ್ರೀಮತಿ ಹೆಚ್. ಎಸ್. ಪ್ರತಿಮಾ ಹಾಸನ್ ರವರಿಗೆ ನೀಡಿ ಸನ್ಮಾನ ಮಾಡಿ ಗೌರವಿಸಲಾಗಿದೆ. ಇವರು ತಮ್ಮದೇ ಆದಂತಹ "ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ" ಸಂಸ್ಥೆಯನ್ನು ಸ್ಥಾಪಿಸಿ ತನ್ನದೇ ಆದ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು, ಬಂಧುವರ್ಗ ಸೇರದಂತೆ ಹಲವರು ಅಭಿನಂದನೆ ಸೂಚಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ