ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕುಗಳು ಸೇರಿದಂತೆ ಕರ್ನಾಟಕದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ 322 ತಾಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಜಿಯೋಏರ್ ಫೈಬರ್ ಇದೀಗ ಲಭ್ಯವಿದೆ.
ಕೇವಲ 599 ರೂಪಾಯಿಯಿಂದ ಪ್ಲಾನ್ ಆರಂಭವಾಗುತ್ತದೆ. ಇದರ ಸಂಪರ್ಕ ಪಡೆದುಕೊಂಡಲ್ಲಿ 13ಕ್ಕೂ ಹೆಚ್ಚು ಒಟಿಟಿ ಅಪ್ಲಿಕೇಷನ್ ಗಳು ಮತ್ತು 800ಕ್ಕೂ ಹೆಚ್ಚು ಡಿಜಿಟಲ್ ಟಿವಿ ಚಾನೆಲ್ ಗಳು ದೊರೆಯಲಿವೆ ಇದರ ಜತೆಗೆ ಜಿಯೋದಿಂದ ಏರ್ ಫೈಬರ್ ಹೊಸ ಗ್ರಾಹಕರಿಗೆ "ಫ್ರೀಡಂ ಆಫರ್" ಶೇಕಡ 30ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಜಿಯೋಫೈಬರ್ ಅಥವಾ ಏರ್ ಫೈಬರ್ ಎಂಬುದು ಇದೀಗ ದೇಶದಲ್ಲಿಯೇ ಅತಿ ವೇಗವಾಗಿ ಬೆಳೆಯುತ್ತಿರುವ ಮತ್ತು ಅತಿ ದೊಡ್ಡದಾದ ಗೃಹ ಬ್ರಾಡ್ ಬ್ಯಾಂಡ್ ಹಾಗೂ ಮನರಂಜನಾ ಸೇವೆಯನ್ನು ಒದಗಿಸುತ್ತಿರುವ ಸಂಸ್ಥೆಯಾಗಿದೆ ಎಂದು ಪ್ರಕಟಣೆ ಹೇಳಿದೆ.
1.2 ಕೋಟಿ ಸಂಪರ್ಕಗಳೊಂದಿಗೆ ಜಿಯೋಫೈಬರ್ ಅಥವಾ ಏರ್ ಫೈಬರ್ ಅತ್ಯಂತ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. ಭಾರತೀಯರ ಮನೆಗಳನ್ನು ಇನ್ನಷ್ಟು ವೇಗವಾಗಿ ಡಿಜಿಟೈಸ್ ಮಾಡುವ ಉದ್ದೇಶದಿಂದ ಮತ್ತು ಭಾರತವನ್ನು ಡಿಜಿಟಲ್ ಸಮುದಾಯವಾಗಿ ಮಾರ್ಪಡಿಸುವ ಉದ್ದೇಶದಿಂದ ಜಿಯೋದಿಂದ ಈ ಭರವಸೆಯ ಕೊಡುಗೆಯನ್ನು ಘೋಷಣೆ ಮಾಡಲಾಗಿದೆಇದರಿಂದಾಗಿ ಇನ್ನಷ್ಟು ಮನೆಗಳಲ್ಲಿ ಈ ಸಂಪರ್ಕ ಪಡೆಯುವುದಕ್ಕೆ ಉತ್ತೇಜನ ದೊರೆಯುತ್ತದೆ. ಈಗಾಗಲೇ ಕೈಗೆಟುಕುವ ಬೆಲೆಯಲ್ಲಿ ಇರುವ ಜಿಯೋಏರ್ ಫೈಬರ್ ಪ್ಲಾನ್ ಗಳ ಜೊತೆಗೆ ಶೇಕಡಾ 30ರಷ್ಟು ರಿಯಾಯಿತಿ ನೀಡಲಾಗುತ್ತಿದೆ ಎಂದು ಕಂಪನಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಫ್ರೀಡಂ ಆಫರ್ ಜೊತೆಗೆ ಹೊಸ ಜಿಯೋಏರ್ ಫೈಬರ್ ಬಳಕೆದಾರರು ಶೇ 30ರಷ್ಟು ರಿಯಾಯಿತಿಯನ್ನು ಹೊಸ ಸಂಪರ್ಕವನ್ನು 1000 ರೂಪಾಯಿಯ ಇನ್ ಸ್ಟಲೇಷನ್ ಶುಲ್ಕದ ಮನ್ನಾದ ಮೂಲಕ ಪಡೆಯುತ್ತಾರೆ. ಇದು ಸೀಮಿತ ಅವಧಿಯ ಕೊಡುಗೆ ಆಗಿದ್ದು, ಈ ಆಫರ್ ಆಗಸ್ಟ್ 15ನೇ ತಾರೀಕಿನ ತನಕ ಇರುತ್ತದೆ ಎಂದು ಪ್ರಕಟಣೆ ಹೇಳಿದೆ. ಎio.ಛಿom ವೆಬ್‍ಸೈಟ್‍ಗೆ ಭೇಟಿ ನೀಡಿ ಮತ್ತು ನಿಮಗಿರುವ ಆಸಕ್ತಿಯನ್ನು ತಿಳಿಸಿ ಅಥವಾ 60008-60008 ಈ ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿ ಸಂಪರ್ಕ ಪಡೆಬಹುದಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ