1 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆ
ಕಲಬುರ್ಗಿ:ಜೆಸ್ಕಾಂನ 7 ಜಿಲ್ಲೆಗಳ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಸೂರ್ಯಘರ್ ಯೋಜನೆಗೆ ಸಲ್ಲಿಕೆಯಾಗಿರುವ ಒಟ್ಟು 2025 ಅರ್ಜಿಗಳಲ್ಲಿ ಒಟ್ಟು 1951 ಅರ್ಜಿಗಳಿಗೆ ಅನುಮೋದನೆ ನೀಡಲಾಗಿದೆ. ದೇಶಾದ್ಯಂತ ಒಂದು ಕೋಟಿ ಮನೆಗಳ ಛಾವಣಿಗೆ ಸೋಲಾರ್ ಫಲಕ ಅಳವಡಿಸುವ ಮೂಲಕ ಉಚಿತ ವಿದ್ಯುತ್ ಒದಗಿಸುವುದು ಪಿ.ಎಂ ಸೂರ್ಯ ಘರ್ ಮಫ್ತಿ ಬಿಜಲಿ ಯೋಜನೆಯ ಮುಖ್ಯಗುರಿಯಾಗಿದೆ.
ಕೇಂದ್ರ ಸರಕಾರದ ವೆಬ್‌ಸೈಟ್‌ನಲ್ಲಿ ರೂಫ್ ಟಾಪ್ ಸೋಲಾರ್ ವ್ಯವಸ್ಥೆಗೆ ಗೃಹ ಬಳಕೆದಾರರು ಅರ್ಜಿ ಸಲ್ಲಿಸಬಹುದು. ಈ ಯೋಜನೆಗೆ ಫೆಬ್ರವರಿ 15, 2024 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದು, ಯೋಜನೆ ಅಡಿಯಲ್ಲಿ ಛಾವಣಿಯ ಮೇಲೆ ಸೌರ ಫಲಕಗಳನ್ನು ಸ್ಥಾಪಿಸಲು 2 ಕಿ.ವ್ಯಾಟ್‌ಗೆ ಶೇ. 60 ರಷ್ಟು, 3 ಕಿ.ವ್ಯಾಟ್‌ಗೆ ಶೇ. 30 ರಷ್ಟು ಸರ್ಕಾರದಿಂದ ಸಬ್ಸಿಡಿ ದೊರೆಯಲಿದೆ. ಯೋಜನೆಯಿಂದ ಸರ್ಕಾರಕ್ಕೆ ವಿದ್ಯುತ್ ವೆಚ್ಚದಲ್ಲಿ ವರ್ಷಕ್ಕೆ 75,000 ಕೋಟಿ ರೂ. ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.
ಸಬ್ಸಿಡಿ: -1 ಕಿ.ಲೋ. ವ್ಯಾಟ್ ಸಾಮರ್ಥ್ಯದ ವ್ಯವಸ್ಥೆಗೆ 30,000 ರೂ. ಸಬ್ಸಿಡಿ ದೊರೆಯುತ್ತಿದ್ದು, 2 ಕಿಲೋ ವ್ಯಾಟ್ ಸಾಮರ್ಥ್ಯದ ವ್ಯವಸ್ಥೆಗೆ 60,000 ರೂ. ಸಬ್ಸಿಡಿ ನಿಗದಿಪಡಿಸಲಾಗಿದೆ. 3 ಕಿಲೋ ವ್ಯಾಟ್ ಮೇಲ್ಪಟ್ಟ ವ್ಯವಸ್ಥೆಗೆ ಗರಿಷ್ಠ ಸಬ್ಸಿಡಿ ಮಿತಿ 78,000 ರೂ. ದೊರೆಯಲಿದೆ.
ಗ್ರಿಡ್ ಸಂಪರ್ಕದ ಲಾಭವೇನು? ಮನೆಯ ರೂಫ್ ಟಾಪ್ ಸೋಲಾರ್ ವ್ಯವಸ್ಥೆಯನ್ನು ಗ್ರಿಡ್ ಜತೆಗೆ ಸಂಪರ್ಕಿಸುವುದರಿಂದ 25 ವರ್ಷಗಳ ಕಾಲ ವಿದ್ಯುತ್ ಬಿಲ್ ಪಾವತಿಸಬೇಕಿಲ್ಲ. ಮನೆಗಳ ಮೇಲ್ಛಾವಣೆಯಲ್ಲಿ ಅಳವಡಿಸುವುದರಿಂದ ಹೆಚ್ಚುವರಿ ಜಾಗದ ಅಗತ್ಯ ಇಲ್ಲ. ನಿರ್ವಹಣೆ ವೆಚ್ಚ ತೀರಾ ಕಡಿಮೆ.
ಅರ್ಹತೆ- 1. ಭಾರತೀಯ ಪ್ರಜೆಯಾಗಿರಬೇಕು.ಸ್ವಂತ ಮನೆ ಹೊಂದಿರಬೇಕು, ಮಾನ್ಯವಾದ ವಿದ್ಯುತ್ ಸಂಪರ್ಕವನ್ನು ಹೊಂದಿರಬೇಕು, ಮನೆಯವರು ಸೋಲಾರ್ ಪ್ಯಾನೆಲ್‌ಗಳಿಗೆ ಬೇರೆ ಯಾವುದೇ ಸಬ್ಸಿಡಿಯನ್ನು ಪಡೆದಿರಬಾರದು.
ಅವಶ್ಯಕ ದಾಖಲೆಗಳು -ಗುರುತಿನ ಆಧಾರ, ವಿಳಾಸದ ಪುರಾವೆ,ವಿದ್ಯುತ್ ಬಿಲ್,ಛಾವಣಿಯ ಮಾಲೀಕತ್ವದ ಪ್ರಮಾಣಪತ್ರ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ