ಪುತ್ತೂರು: ಕರಾಟೆ ಪಂದ್ಯಾಟ- ವಿವೇಕಾನಂದ ಪಿಯು ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Upayuktha
0


ಪುತ್ತೂರು: 
ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜು ಉಪ್ಪಿನಂಗಡಿ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದಿರುತ್ತದೆ. 


ಬಾಲಕರ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಅದ್ವಿತ್‌ ಶರ್ಮ, ದುರ್ಗೇಶ್‌ ಮೌರ್ಯ ದ್ವಿತೀಯ ವಾಣಿಜ್ಯ ವಿಭಾಗದ ಸೃಜನ್‌ ಲಕ್ಕಪ್ಪ ಪ್ರಥಮ ವಾಣಿಜ್ಯ ವಿಭಾಗದ ಪ್ರಮಥ್‌ ಎಮ್‌ ಭಟ್‌, ರಾಮಪ್ರಸಾದ್‌ ಬಿ ಎನ್‌ ಪ್ರಥಮ ವಿಜ್ಞಾನ ವಿಭಾಗದ ರಿಷಿ ಬೆಳ್ಳಿಯ ಪದಕ ಗಳಿಸಿರುತ್ತಾರೆ. 


ಬಾಲಕಿಯರ ವಿಭಾಗದಲ್ಲಿ ವಾಣಿಜ್ಯ ವಿಭಾಗದ ಸಂಪನ್ನಲಕ್ಷ್ಮಿ ಹಾಗೂ ದೃತಿ ದ್ವಿತೀಯ ವಿಜ್ಞಾನ ವಿಭಾಗದ ಸಾತ್ವಿ ಬಿ.ಕೆ ದ್ವಿತೀಯ ಕಲಾ ವಿಭಾಗದ ತೃಪ್ತಿ ಎ ಕೆ ಪ್ರಥಮ ವಾಣಿಜ್ಯ ವಿಭಾಗದ ಪ್ರಾಪ್ತಿ ಶೆಟ್ಟಿ ಇವರು ಚಿನ್ನದ ಪದಕವನ್ನು ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.


ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top