ಕಾಳಿನದಿಯ ಹಳೆ ಸೇತುವೆ ಕುಸಿತ, ನದಿಗೆ ಬಿದ್ದ ಲಾರಿ; ಕಾರವಾರ-ಸದಾಶಿವಗಢ ಸಂಪರ್ಕ ಕಡಿತ

Upayuktha
0


ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೋಡಿಬಾಗದಲ್ಲಿರುವ ಕಾಳಿ ನದಿಯ ಹಳೆಯ ಸೇತುವೆ ಮಂಗಳವಾರ ತಡರಾತ್ರಿ 1:30ರ ಸುಮಾರಿಗೆ ಕುಸಿದು ಬಿದ್ದಿದೆ. ಆ ಸಂದರ್ಭದಲ್ಲಿ ಸೇತುವೆ ಮೇಲೆ ಸಂಚರಿಸುತ್ತಿದ್ದ ಲಾರಿಯೊಂದು ನದಿಗೆ ಉರುಳಿಬಿದ್ದಿದೆ. ಲಾರಿಯ ಚಾಲಕನನ್ನು ರಕ್ಷಿಸಲಾಗಿದೆ.


ಕಾಳಿ ನದಿಯ ಹಳೆಯ ಸೇತುವೆಯು ಮೂರು ಕಡೆಗಳಲ್ಲಿ ಇದ್ದಕ್ಕಿದ್ದಂತೆ ಮುರಿದು ಬಿದ್ದಿದೆ. ಆ ವೇಳೆಗೆ ಗೋವಾದಿಂದ ತಮಿಳುನಾಡಿಗೆ ಹೋಗುತ್ತಿದ್ದ ಲಾರಿಯೊಂದು ಸೇತುವೆಯ ಮೇಲಿತ್ತು. ಲಾರಿಯ ಚಾಲಕ ಪಳನಿಸ್ವಾಮಿ (37) ಎಂಬಾತನನ್ನು ರಕ್ಷಿಸಲಾಗಿದೆ.


ಕಾರವಾರ ಮತ್ತು ಸದಾಶಿವಗಢವನ್ನು ಸಂಪರ್ಕಿಸುವ ಈ ಸೇತುವೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಈ ಮಾರ್ಗದಲ್ಲಿ ಸಂಚಾರ ನಿರ್ಬಂಧ ಹೇರಿದೆ. ಚತುಷ್ಪಥ ಹೆದ್ದಾರಿ ಕಾಮಗಾರಿ ವೇಳೆ ನಿರ್ಮಿಸಲಾಗುರುವ ಹೊಸ ಸೇತುವೆ ದೃಢತೆಯನ್ನು ಪರೀಕ್ಷಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಗಳಿಗೆ ಜಿಲ್ಲಾಡಳಿತ ಸೂಚಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top