ವಿದ್ವಾನ್ ಕೆರೆಕೈ ಉಮಾಕಾಂತ ಭಟ್ಟರಿಗೆ ಕೀರಿಕ್ಕಾಡು ಪ್ರಶಸ್ತಿ

Upayuktha
0

ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾಸಂಘ ದೇಲಂಪಾಡಿ ವತಿಯಿಂದ ನೀಡಲಾಗುವ ಪ್ರಶಸ್ತಿ 




ದೇಲಂಪಾಡಿ: ಎಂಭತ್ತರ ಸಂಭ್ರಮದಲ್ಲಿರುವ ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಸಂಸ್ಥಾಪಕಾಧ್ಯಕ್ಷರು, ಯಕ್ಷಗಾನ ಗುರುಕುಲದ ರೂವಾರಿ ಕವಿ, ಅರ್ಥಧಾರಿ, ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಸಂಸ್ಮರಣೆಯೊಂದಿಗೆ ನೀಡಲಾಗುತ್ತಿರುವ 2024 ರ ಸಾಲಿನ ಪ್ರತಿಷ್ಠಿತ ಕೀರಿಕ್ಕಾಡು ಪ್ರಶಸ್ತಿಗೆ ವಿದ್ವಾನ್ ಕೆರೆಕೈ ಉಮಾಕಾಂತ ಭಟ್ಟರನ್ನು ಆಯ್ಕೆ ಮಾಡಲಾಗಿದೆ.


ವಿದ್ವಾನ್ ಉಮಾಕಾಂತ ಭಟ್ಟರು ಖ್ಯಾತ ಯಕ್ಷಗಾನ ಅರ್ಥಧಾರಿಯಾಗಿ, ಪ್ರವಚನಕಾರರಾಗಿ, ಉಪನ್ಯಾಸಕರಾಗಿ, ಕವಿಯಾಗಿ ನಾಡಿನ ಉದ್ದಗಲಗಳಲ್ಲೂ ಪ್ರಸಿದ್ಧರಾದವರು‌‌. ನ್ಯಾಯಶಾಸ್ತ್ರ ಪಂಡಿತರಾಗಿ, ಪ್ರಾಚಾರ್ಯರಾಗಿ ಮೇಲುಕೋಟೆಯ ಸಂಸ್ಕೃತ ಮಹಾವಿದ್ಯಾಲಯದಲ್ಲಿ ಸುದೀರ್ಘ ಕಾಲ  ಸೇವೆಯನ್ನು ಸಲ್ಲಿಸಿದ ಉಮಾಕಾಂತ ಭಟ್ಟರು ಬಹುಮಾನ್ಯರು ಮತ್ತು ಬಹುಶ್ರುತ ವಿದ್ವಾಂಸರು‌. 


ಆಗಸ್ಟ್ 31ರಂದು ದಿನಪೂರ್ತಿ ನಡೆಯಲಿರುವ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ 80ರ ಸಂಭ್ರಮದ ಕಲೋತ್ಸವದಲ್ಲಿ ಪ್ರೊ‌. ಶ್ರೀಪತಿ ಕಲ್ಲೂರಾಯ ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಅವರ ಗೌರವ ಉಪಸ್ಥಿತಿಯೊಂದಿಗೆ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ನಡುವೆ ಕೀರಿಕ್ಕಾಡು ಪ್ರಶಸ್ತಿಯನ್ನು ವಿದ್ವಾನ್ ಉಮಾಕಾಂತ ಭಟ್ಟರಿಗೆ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಸಂಘದ ಅಧ್ಯಕ್ಷ ಡಾ. ರಮಾನಂದ ಬನಾರಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top