ಧರ್ಮಸ್ಥಳದಲ್ಲಿ “ಕೆಸರ್‌ಡ್ ಒಂಜಿ ದಿನ”

Upayuktha
0


ಧರ್ಮಸ್ಥಳ:
ಮೂಡಂಗಲ್ ಫ್ರೆಂಡ್ಸ್ ಬಳಗದ ಆಶ್ರಯದಲ್ಲಿ ಭಾನುವಾರ ಧರ್ಮಸ್ಥಳದಲ್ಲಿ ಆಯೋಜಿಸಿದ “ಕೆಸರ್‌ಡ್ ಒಂಜಿ ದಿನ” ಕಾರ್ಯಕ್ರಮವನ್ನು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಶ್ರೀ ಎ. ವಿ. ಶೆಟ್ಟಿ ಉದ್ಘಾಟಿಸಿದರು.


ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಸಂಘಟಿತರಾಗಿ ಆಯೋಜಿಸುವ ಇಂತಹ ಕಾರ್ಯಕ್ರಮಗಳಿಂದ ಪರಸ್ಪರ ಪ್ರೀತಿ-ವಿಶ್ವಾಸ, ಆತ್ಮೀಯತೆ ಹೆಚ್ಚಾಗಿ ಸಾಮಾಜಿಕ ಸಾಮರಸ್ಯ ಮೂಡಿಬರುತ್ತದೆ ಎಂದು ಶ್ರೀ ಎ. ವಿ. ಶೆಟ್ಟಿ ಹೇಳಿದರು.


ದೈಹಿಕ ಮತ್ತು ಮಾನಸಿಕ ಆರೋಗ್ಯವರ್ಧನೆಗೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ಹೇಳಿದ ಅವರು ಎಲ್ಲಾ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು.ಬಳಿಕ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು.


ದೇವಸ್ಥಾನದ ಪಾರುಪತ್ಯಗಾರ್ ಶ್ರೀ ಲಕ್ಷ್ಮಿನಾರಾಯಣ್ ರಾವ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ವಿಮಲಾ, ವಕೀಲರಾದ ಶ್ರೀ ಕೇಶವ ಬೆಳಾಲ್, ಶ್ರೀ ಧನಕೀರ್ತಿ ಆರಿಗ, ಮುರಳಿಧರ ದಾಸ್, ಶ್ರೀ ಹರ್ಷ ಜೈನ್ ಮತ್ತು ಗದ್ದೆಯ ಮಾಲಕ ಕೃಷ್ಣಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top