SDM ಮಹಿಳಾ ಐ.ಟಿ.ಐ: NCVT ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ಕೋರ್ಸ್ ಆರಂಭ

Upayuktha
0


ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರೂ ಪೂಜ್ಯರೂ ಆದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸೂಚನೆಯಂತೆ, 2024-25 ನೇ ಸಾಲಿಗೆ ಅನ್ವಯಿಸುವಂತೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಉಜಿರೆಯಲ್ಲಿ ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನವದೆಹಲಿಯಿಂದ ಶಾಶ್ವತವಾಗಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ (FD&T) ವೃತ್ತಿಯನ್ನು ಪ್ರಾರಂಭಿಸಲಾಗುವುದು. 


ಈಗಿನ ಕಾಲದ ಬೇಡಿಕೆಗೆ ತಕ್ಕಂತೆ ಮಹಿಳೆಯರ, ಮಕ್ಕಳ ಹಾಗೂ ಪುರುಷರ ವಿವಿಧ ನೂತನ ವಸ್ತ್ರ ವಿನ್ಯಾಸ, ಎಂಬ್ರೋಯಿಡರಿ ಮುಂತಾದ ಆಧುನಿಕ ಶಿಕ್ಷಣ ಪದ್ಧತಿಯನ್ನು ಇದರಲ್ಲಿ ಅಳವಡಿಸಲಾಗುವುದು. ಕನಿಷ್ಠ SSLC ಉತ್ತೀರ್ಣಗೊಂಡ ತಾಲೂಕಿನ ಗ್ರಾಮೀಣ ಭಾಗದ ಹಾಗೂ ರಾಜ್ಯದ ವಿದ್ಯಾರ್ಥಿನಿಯರು (ವಯೋಮಿತಿ ಇರುವುದಿಲ್ಲ) ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದೆಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಅಥವಾ ಕಛೇರಿ ಸಂಖ್ಯೆ 08256-236800 ಅಥವಾ ಪ್ರಾಂಶುಪಾಲರ ದೂರವಾಣಿ ಸಂಖ್ಯೆ 9449200768 ಸಂಪರ್ಕಿಸಬಹುದು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top