ಮಂಗಳೂರು: ತಾಲೂಕು ಪಂಚಾಯತ್ ಕೆಡಿಪಿ ಸಭೆ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈರವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.
ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಇಲಾಖಾ ಪ್ರಗತಿ, ಪ್ರಸಕ್ತ ಚಾಲ್ತಿಯಲ್ಲಿರುವ ಯೋಜನೆಗಳ ಮಾಹಿತಿ ಹಂಚಿಕೊಂಡರು.
ಆರೋಗ್ಯ ಇಲಾಖೆಯಡಿ ಡೆಂಗ್ಯುವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಕ್ರಮದ ಬಗ್ಗೆ, ಕ್ಷಯ ಮುಕ್ತ ಭಾರತ ಯೋಜನೆ, ಆಯುಷ್ ಇಲಾಖೆಯಡಿ ನಡೆಸಲ್ಪಡುವ ಆರೋಗ್ಯ ತಪಾಸಣಾ ಶಿಬಿರಗಳು, ತೋಟಗಾರಿಕಾ ಇಲಾಖೆಯಡಿ ಬೆಳೆಯುವ ತೋಟಗಾರಿಕಾ ಬೆಳೆಗಳ ಉತ್ಪದನೆ ಹೆಚ್ಚಿಸುವಲ್ಲಿ ತಂತ್ರಜ್ಞಾನದ ಬಳಕೆ ಬಗ್ಗೆ, ಅಡಿಕೆ ಕೃಷಿಯ ಜೊತೆ ಜೊತೆಗೆ ಮಿಶ್ರ ಬೆಳೆಗಳಾದ ಕಾಳು ಮೆಣಸು, ಕೊಕೊ ಬೆಳೆಗಳನ್ನು ಸೇರಿಸುವ ಬಗ್ಗೆ, ಕೃಷಿ ಇಲಾಖೆಯಡಿ ಭತ್ತದ ಬೆಳೆ ಹೊರತುಪಡಿಸಿ ಜೋಳ ಬೆಳೆಯುವ ಪ್ರಯತ್ನದ ಬಗೆಗೆ, ಕಟಾವು ಯಂತ್ರ ಖರೀದಿ ಮಾಡಿದ ರೈತರಿಗೆ ಇಲಾಖಾ ಸಹಾಯಧನ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ಸ್ಥಿತಿಗತಿ, ಅಲ್ಲಿನ ನೇಮಿಸಿದ, ಕರ್ತವ್ಯ ನಿರ್ವಹಿಸುತ್ತಿರುವ ಮತ್ತು ಖಾಲಿ ಇರುವ ಸಿಬ್ಬಂದಿ ವಿವರ, ವಿದ್ಯಾರ್ಥಿಗಳಿಗೆ ಪಾವತಿ ಅಗಬೇಕಾಗಿರುವ ವಿದ್ಯಾರ್ಥಿ ವೇತನ ಸಕಾಲಕ್ಕೆ ಪಾವತಿ ಆಗುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು, ಆಡಳಿತಾಧಿಕಾರಿಗಳು, ತಾಲೂಕು ತಹಶೀಲ್ದಾರ್, ಸಹಾಯಕ ನಿರ್ದೇಶಕರು ಹಾಜರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ