ಮಂಗಳೂರು: ಪಡುಕೋಡಿ ಬಂಗ್ರಕೂಳೂರು ಪ್ರದೇಶದಲ್ಲಿ ಫಲ್ಗುಣಿ ನದಿಯು ಗ್ರಾಮವನ್ನು ಆವರಿಸಿದ್ದು ಕೂಳೂರು ಚರ್ಚಿನ ಸಭಾಂಗಣದಲ್ಲಿ ತಾತ್ಕಾಲಿಕವಾಗಿ ಜಲಾವೃತವಾದ ಪ್ರದೇಶದ ನಿವಾಸಿಗಳಿಗೆ ಆಶ್ರಯ ಕಲ್ಪಿಸಲಾಗಿದೆ. ಸುಮಾರು 19೦ ಕ್ಕೂ ಹೆಚ್ಚು ಜನ ಇಲ್ಲಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು.
ಈ ಸಂದರ್ಭ ಅಧಿಕಾರಿಗಳಿಗೆ ಸೂಚನೆ ನೀಡಿ ನಷ್ಟ ಪರಿಹಾರ ಹಾಗೂ ಪ್ರಾಕೃತಿಕ ವಿಕೋಪದಿಂದ ಸಿಗುವ ಸವಲತ್ತುಗಳನ್ನು ದೊರಕುವಂತೆ ಮಾಡಲು ಬೇಕಾದ ಇಲ್ಲ ಕಾನೂನಾತ್ಮಕ ಪ್ರಕ್ರಿಯೆ ಮಾಡುವಂತೆ ಸೂಚಿಸಿದರು. ಈ ಸಂದರ್ಭ ಉಮೇಶ್ ಬಂಗೇರ ಬಂಗ್ರಕೂಳೂರು, ರಮೇಶ್ ಶೆಟ್ಟಿ, ಪ್ರಜ್ಞೇಶ್ ಶೆಟ್ಟಿ, ಉಮೇಶ್ ಮಲ್ಲಾರಾಯಣ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ