ದ.ಕ. ಜಿಲ್ಲೆಗೆ 300 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿ: ಸರಕಾರಕ್ಕೆ ಶಾಸಕ ಕಾಮತ್ ಆಗ್ರಹ

Upayuktha
0

'ಹಗರಣಗಳ ಮೇಲೆ ಹಗರಣ ನಡೆಸಿ ರಾಜ್ಯ ಸರಕಾರ ದಿವಾಳಿಯಾಗಿದೆ'




ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಸೊತ್ತು ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದರು.


ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಮನೆಗಳು ಕುಸಿದಿದ್ದು ಮನೆಗಳ ಮೇಲೆ ಮರಗಳು ಉರುಳಿಬಿದ್ದು ಸುಮಾರು 300 ಕೋಟಿಗೂ ಅಧಿಕ ಹಾನಿ ಉಂಟಾಗಿದೆ. ಜಿಲ್ಲೆಯಲ್ಲಿ ಮನೆಹಾನಿ, ಕೃಷಿ ಹಾನಿ ವ್ಯಾಪಕವಾಗಿದ್ದು ಮುಖ್ಯಮಂತ್ರಿ ಅವರು ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಂಡು ಪರಿಹಾರ ಒದಗಿಸಬೇಕು ಎಂದು ಹೇಳಿದರು.

 


ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ, ಭಾಗಶ ಹಾನಿಯಾಗಿದ್ದರೆ 2.50 ಲಕ್ಷ, ನೀರು ನುಗ್ಗಿದ್ದರೆ 10000 ಪರಿಹಾರ ಘೋಷಿಸಿದ್ದರು. ಈಗಿನ ಸರಕಾರ ದಿವಾಳಿಯಾಗಿದ್ದು ಸರಕಾರದ ಪರಿಹಾರ ಕೊಡಲು ವಿಫಲವಾದರೆ ಕೊನೆಪಕ್ಷ ಎನ್‌ಡಿಆರ್ ಎಫ್ ವತಿಯಿಂದ ನೀಡಲಾಗುವ ಪರಿಹಾರ ಆದ್ರೂ ಕೊಡಿ ಎಂದು ಒತ್ತಾಯಿಸಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿಯವರೆಗೆ ಜಿಲ್ಲೆಗೆ ಭೇಟಿ ಕೊಟ್ಟಿಲ್ಲ. ಮೂಡ ಭ್ರಷ್ಟಾಚಾರ ದಲ್ಲಿ ಮುಳುಗಿರುವ ಅವರು ಕುರ್ಚಿ ಉಳಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಸರಕಾರ ಎಲ್ಲ ರೀತಿಯಲ್ಲೂ ಸಂಪೂರ್ಣ ವಿಫಲವಾಗಿದೆ ಎಂದರು.


ಡೆಂಗ್ಯೂ ರೋಗ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಜಿಲ್ಲೆಯಲ್ಲಿ ಎಷ್ಟು ಪ್ರಕರಣ ಇದೆ ಎನ್ನುವುದೇ ತಿಳಿಯುತ್ತಿಲ್ಲ. ರಾಜ್ಯ ಸರಕಾರ, ಆರೋಗ್ಯ ಇಲಾಖೆ ಸಂಪೂರ್ಣ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಟೀಕಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ಲಲ್ಲೇಶ್, ರಮೇಶ್ ಹೆಗ್ಡೆ, ಮನಪಾ ಸದಸ್ಯೆ ಪೂರ್ಣಿಮಾ, ಪ್ರಮುಖರಾದ ಸಂಜಯ್ ಪ್ರಭು, ನಿತಿನ್ ಕುಮಾರ್, ರವಿಶಂಕರ್ ಮಿಜಾರ್ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top