ನಂತೂರು ವೃತ್ತ ರಸ್ತೆ ಅಗಲೀಕರಣ ಪೂರ್ವ ಹಂತದ ಕಾಮಗಾರಿ ಪರಿಶೀಲಿಸಿದ ಸಂಸದ ಕ್ಯಾ. ಚೌಟ

Upayuktha
0

ಮಂಗಳೂರು: ಮಂಗಳೂರು ಜನರ ಪಾಲಿಗೆ ಹಲವು ವರ್ಷಗಳ ಬೇಡಿಕೆಯಾಗಿರುವ ರಾಷ್ಟ್ರೀಯ ಹೆದ್ದಾರಿ 66ರ ನಂತೂರು ವೃತ್ತದಲ್ಲಿ ರಸ್ತೆ ಅಗಲೀಕರಣದ ಪೂರ್ವ ಹಂತದ ಕಾಮಗಾರಿ ಆರಂಭಗೊಂಡಿದೆ. ಈ ಹಿನ್ನಲೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಸಂಜೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ನಂತೂರು ವೃತ್ತವು ಹೆದ್ದಾರಿ ವ್ಯಾಪ್ತಿಯಲ್ಲಿದ್ದು, ಅಲ್ಲಿ ದಿನನಿತ್ಯವೂ ಹೆಚ್ಚಿನ ವಾಹನ ದಟ್ಟನೆ ಇರುವ ಕಾರಣ ಪೂರ್ಣ ಹಂತದ ಕಾಮಗಾರಿ ಆರಂಭಿಸುವುದಕ್ಕೂ ಮೊದಲು ಟ್ರಾಫಿಕ್‌ ಸಮಸ್ಯೆಯಾಗದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ಹೀಗಾಗಿ, ಸಂಸದರು ಈ ವಿಚಾರಗಳ ಬಗ್ಗೆ ಹೆದ್ದಾರಿ ಪ್ರಾಧಿಕಾರ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಜತೆಗೆ ಚರ್ಚಿಸಿ ಕೆಲವು ಪೂರಕ ಸಲಹೆಗಳನ್ನು ನೀಡಿದ್ದಾರೆ.


ಇದೇ ವೇಳೆ ಸಂಸದ ಕ್ಯಾ. ಚೌಟ ಅವರು ಈ ರಸ್ತೆ ಅಗಲೀಕರಣಕ್ಕೆ ಭೂಮಿ ಬಿಟ್ಟು ಕೊಟ್ಟಿರುವ ಸ್ಥಳೀಯ ನಿವಾಸಿಯೊಬ್ಬರ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top