ಮಂಗಳೂರು:ನಾರಾಯಣ ಗುರು ಜಯಂತಿ ಕಾರ್ಯಕ್ರಮ

Upayuktha
0


ಮಂಗಳೂರು:
ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ವತಿಯಿಂದ ನಾರಾಯಣ ಗುರು ಜಯಂತಿಯನ್ನು ದಿನಾಂಕ 23/08/2024ರ ಶುಕ್ರವಾರದಂದು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಬೆಳಗ್ಗೆ 11.30ಕ್ಕೆ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ರಾಜ್ಯ ವಿಧಾನ ಪರಿಷತ್‌ ಸದಸ್ಯ ಬಿ. ಕೆ. ಹರಿಪ್ರಸಾದ್‌ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಕರ್ನಾಟಕ ವಿಧಾನ ಸಭಾ ಸಭಾಧ್ಯಕ್ಷ ಯು.ಟಿ. ಖಾದರ್‌ ಅವರು ಘನಉಪಸ್ಥಿತಿ ವಹಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್.‌ ಧರ್ಮ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. 


ಪೀಠದ ಸಲಹಾ ಸಮಿತಿ ಸದಸ್ಯರುಗಳಾದ ಪಿ.ವಿ. ಮೋಹನ್‌, ಬಾಬು ಶಿವ ಪೂಜಾರಿ, ವಿಜಯ್‌ ಕುಮಾರ್‌ ಸೊರಕೆ, ಸತೀಶ್‌ ಎನ್‌. ಕರ್ಕೇರಾ, ನಮಿತಾ ಶ್ಯಾಮ್‌, ಮೋಹನ್‌ ರಾಜ್‌ ಕೆ. ಆರ್‌., ಕೆ. ಮೋಹನ್‌ ಚಂದ್ರನ್‌ ನಂಬಿಯಾರ್‌ ಉಪಸ್ಥಿತರಿಲಿದ್ದಾರೆ ಎಂದು ನಾರಾಯಣ ಗುರು ಅಧ್ಯಯನ ಪೀಠದ ಸಂಯೋಜಕ ಡಾ. ಜಯರಾಜ್‌ ಎನ್‌. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top