ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಲು ಸಾಲು ಹಗರಣಗಳ ವಿರುದ್ಧ ಬಿಜೆಪಿ- ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ಮೈಸೂರು ಚಲೋ ಬೃಹತ್ ಪ್ರತಿಭಟನಾ ಪಾದಯಾತ್ರೆಗೆ ದಿನದಿಂದ ದಿನಕ್ಕೆ ನಾಡಿನಾದ್ಯಂತ ಜನಬೆಂಬಲ ಹೆಚ್ಚಾಗುತ್ತಿರುವುದು ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಂತ್ಯ ಸಮೀಪಿಸುತ್ತಿರುವುದರ ಲಕ್ಷಣ ಎಂದು ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ ಕಾಮತ್ ಅವರು ಹೇಳಿದರು.
ಪಾದಯಾತ್ರೆಯ ಸಂದರ್ಭದಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾವಿರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಕೇವಲ 15 ತಿಂಗಳಿನಲ್ಲಿಯೇ ಸಾವಿರಾರು ಕೋಟಿ ರೂಗಳ ಹಗರಣಗಳ ಸರಮಾಲೆಯಿಂದ ದಾಖಲೆ ಬರೆದಿರುವ ಕಾಂಗ್ರೆಸ್ ಇನ್ನೆಂದೂ ರಾಜ್ಯದಲ್ಲಿ ಅಧಿಕಾರಕ್ಕೆ ಬರಕೂಡದು ಎಂದು ಜನರೇ ನಿರ್ಧರಿಸಿರುವ ಕಾಲ ಬಂದಾಗಿದೆ ಎಂದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ