ಆ.24 ರಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪದವಿಪ್ರದಾನ

Upayuktha
0


ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ೨೦೨೩-೨೦೨೪ ನೇ ಶೈಕ್ಷಣಿಕ ಸಾಲಿನ ಪದವಿಪ್ರದಾನ ಸಮಾರಂಭವು ಆಗಸ್ಟ್ ೨೪ ರಂದು ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ನಡೆಯಲಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಡಾ. ಬಿ.ಇ ರಂಗಸ್ವಾಮಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ವೈಸ್-ಚಾನ್ಸಲರ್ ಡಾ. ಎಂ.ಎಸ್. ಮೂಡಿತ್ತಾಯ ಹಾಗೂ ಟೆಕ್ನಿಕಲ್ ಎಜುಕೇಶನ್ ವಿಭಾಗದ ಉಪಾಧ್ಯಕ್ಷ ಡಾ. ಗೋಪಾಲ ಮುಗೆರಾಯ ಕಾರ್ಯಕ್ರಮದ ಗೌರವ ಅತಿಥಿಗಳಾಗಿ ಆಗಮಿಸುವರು. ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶ್ರೀ. ಎನ್ ವಿನಯ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆಗೈದ ಬಿ.ಇ ವಿದ್ಯಾರ್ಥಿಗಳನ್ನು ಚಿನ್ನ ಮತ್ತು ಬೆಳ್ಳಿಯ ಪದಕವನ್ನು ನೀಡುವ ಮೂಲಕ ಗುರುತಿಸಲಾಗುವುದು ಹಾಗೂ ಬಿ.ಇ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಸಲಾಗುವುದು.


ಪ್ರತೀ ವರ್ಷದಂತೆ ಈ ಕಾರ್ಯಕ್ರಮವನ್ನು ಲೈವ್ ವೆಬ್‌ಕಾಸ್ಟ್ ಮಾಡುವ ಯೋಜನೆಯನ್ನು ಸಂಸ್ಥೆಯು ರೂಪಿಸಿದ್ದು, ಕಾರ್ಯಕ್ರಮದ ಲೈವ್ ವೀಕ್ಷಣೆಗಾಗಿ youtube.com/c/NMAMInstituteofTechnology ಲಿಂಕ್‌ನ್ನು ಉಪಯೋಗಿಸಬಹುದಾಗಿದೆ ಎಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top