ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಂತ್ರಿಕ ಮಹಾವಿದ್ಯಾಲಯದ ಜೈವಿಕ ತಂತ್ರಜ್ಞಾನ (ಬಯೋ ಟೆಕ್ನಾಲಜಿ) ವಿಭಾಗವು ಕರ್ನಾಟಕ ಸರಕಾರದ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ (ಕೆಎಸ್ ಬಿಡಿಬಿ) ಪ್ರಾಯೋಜಿತ ಉಡುಪಿ ಜಿಲ್ಲಾ ಜೈವಿಕ ಇಂಧನ ಕೇಂದ್ರದ ಸಹಯೋಗದಲ್ಲಿ ವಿಶ್ವ ಜೈವಿಕ ಇಂಧನ ದಿನಾಚರಣೆಯನ್ನು ಆಗಸ್ಟ್ 12ರಂದು ಆಚರಿಸಿತು. ಡಾ. ನಿರಂಜನ್ ಎನ್. ಚಿಪ್ಲೂಣ್ಕರ್, ಪ್ರಾಂಶುಪಾಲರು ಮತ್ತು ಸಂಸ್ಥೆಯ ಮುಖ್ಯಾಧಿಕಾರಿಗಳು ಕಾರ್ಯಕ್ರಮವನ್ನು ಗಿಡ ನೆಡುವುದರ ಮೂಲಕ ನಡೆಸಿಕೊಟ್ಟರು. ಬಯೋ ಟೆಕ್ನಾಲಜಿ ಎಂಜಿನೀಯರಿಂಗ್ ವಿಭಾಗದ ಮುಖ್ಯಸ್ಥರು ಡಾ. ಉಜ್ವಲ್ ಪಿ., ಭೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಕಾರ್ಯಕ್ರಮದಲ್ಲಿ ಭಾಗಿಯಾದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ