ಉಜಿರೆ ಎಸ್.ಡಿ.ಎಂ. ಕಾಲೇಜಿನ ಭಾನುಪ್ರಕಾಶ್ ಅವರಿಗೆ ಪಿಎಚ್.ಡಿ. ಪದವಿ

Upayuktha
0


ಉಜಿರೆ: ಉಜಿರೆಯ ಶ್ರೀ ಧ. ಮಂ. ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಭಾನುಪ್ರಕಾಶ್ ಬಿ.ಇ. ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ. ಪದವಿ ನೀಡಿ ಗೌರವಿಸಿದೆ.


ಡಾ. ಎ. ಜಯಕುಮಾರ್ ಶೆಟ್ಟಿ ಮಾರ್ಗದರ್ಶನದಲ್ಲಿ ಭಾನುಪ್ರಕಾಶ್ ಅವರು ‘ತೆರಿಗೆದಾರರ ಹೂಡಿಕೆ ನಡವಳಿಕೆಗಳು’ ಎಂಬ ವಿಷಯದ ಮೇಲೆ ನಡೆಸಿದ ಪ್ರೌಢ ಪ್ರಬಂಧಕ್ಕೆ ಪಿಎಚ್.ಡಿ. ಪದವಿ ಲಭಿಸಿದೆ.


ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಭುವನಹಳ್ಳಿಯ ಮೂಲದವರಾದ ಭಾನುಪ್ರಕಾಶ್ ಅವರು ಕಳೆದ ಹದಿನೈದು ವರ್ಷಗಳಿಂದ ಉಜಿರೆ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


ಜಯಮ್ಮ ಮತ್ತು ಈಶ್ವರ್ ದಂಪತಿಯ ಪುತ್ರ ಭಾನುಪ್ರಕಾಶ್ ಅವರು ಎಸ್.ಡಿ.ಎಂ. ತೆರಿಗೆ ಸಲಹಾ ಕೇಂದ್ರದಲ್ಲಿ ತೆರಿಗೆ ಸಲಹೆಗಾರರಾಗಿ ಹಾಗೂ ಎನ್.ಸಿ.ಸಿ. ಆರ್ಮಿ ವಿಭಾಗದ ಅಧಿಕಾರಿಯಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕವಾಗಿ ಭಾನುಪ್ರಕಾಶ್ ಅವರು ಬರೆದಿರುವ ಹದಿನೈದಕ್ಕೂ ಅಧಿಕ ಪುಸ್ತಕಗಳು ಪ್ರಕಟಗೊಂಡಿವೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top