ಯೋಗ:ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

Upayuktha
0


ಪುತ್ತೂರು :
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಹಾಗೂ ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ  ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯಲ್ಲಿ  ಆಗಸ್ಟ್ 28ರಂದು ನಡೆದ ದ.ಕ. ಜಿಲ್ಲಾ ಮಟ್ಟದ ಪ.ಪೂ   ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ  ದ್ವಿತೀಯ ವಾಣಿಜ್ಯ ವಿಭಾಗದ  ನಿಖಿಲ್ ಬಿ. ಕೆ. ಇವರು  ದ್ವಿತೀಯ  ಸ್ಥಾನ ಪಡೆದು  ಬೆಂಗಳೂರು ಗ್ರಾಮಾಂತರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.


ಇವರು ನರಿಮೊಗರು ನಿವಾಸಿ ಬಾಲಚಂದ್ರ ಕೆ ಹಾಗೂ ಪ್ರಮೀಳ ಜಿ ದಂಪತಿಗಳ ಪುತ್ರನಾಗಿದ್ದು, ನವೀನ್ ಕುಮಾರ್  ಮಾಡಾವು  ತರಬೇತಿಯನ್ನು ನೀಡಿರುತ್ತಾರೆ.

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ  ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top