ಯೋಗ: ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Upayuktha
0


ಪುತ್ತೂರು :
ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ(ರಿ), ಚಿಕ್ಕಮಗಳೂರು ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಮತ್ತು ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ, ಕಡೂರು ಇದರ ಸಂಯುಕ್ತ ಆಶ್ರಯದಲ್ಲಿ   ಚಿಕ್ಕಮಗಳೂರಿನ ಕಡೂರು ಶ್ರೀಮತಿ ಪುಟ್ಟಮ್ಮ ಬೆಂಕಿ ಲಕ್ಷ್ಮಿಯ್ಯ ಕಲ್ಯಾಣ ಮಂಟಪ ಮಲ್ಲೇಶ್ವರದಲ್ಲಿ ಆಗಸ್ಟ್ 17,18 ರಂದು ನಡೆದ 14 ರಿಂದ 18ರ ವಯೋಮಿತಿಯ '5ನೇ  ರಾಜ್ಯಮಟ್ಟದ  ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್  ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ  ದ್ವಿತೀಯ ವಾಣಿಜ್ಯ ವಿಭಾಗದ  ನಿಖಿಲ್ ಬಿ. ಕೆ. ಇವರು ಆರ್ಟಿಸ್ಟಿಕ್ ಪೇರ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕರ ಜೂನಿಯರ್ ಟ್ರೆಡಿಶನಲ್ ವಿಭಾಗದಲ್ಲಿ ತೃತೀಯ ಸ್ಥಾನ  ಪಡೆದು ಅಸ್ಸಾಂನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.


ಇವರು ನರಿಮೊಗರು ನಿವಾಸಿ ಬಾಲಚಂದ್ರ ಕೆ ಹಾಗೂ ಪ್ರಮೀಳ ಜಿ ದಂಪತಿಗಳ ಪುತ್ರನಾಗಿದ್ದು,  ನವೀನ್ ಕುಮಾರ್  ಮಾಡವು ತರಬೇತಿಯನ್ನು ನೀಡಿರುತ್ತಾರೆ.


ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ  ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top