ಉಜಿರೆ: ಫೋಟೊಗ್ರಫಿ ಮತ್ತು ವೀಡಿಯೊಗ್ರಫಿ ತರಬೇತಿ ಸಮಾರೋಪ
ಉಜಿರೆಯಲ್ಲಿ ರುಡ್‌ಸೆಟ್ ಸಂಸ್ಥೆಯಲ್ಲಿ 30 ದಿನಗಳಲ್ಲಿ ನಡೆದ “ಫೋಟೊಗ್ರಫಿ ಮತ್ತು ವೀಡಿಯೊಗ್ರಫಿ” ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.
ಇಂದು ವಿವಿಧ ರೀತಿಯ ಪ್ರಿಂಟಿಂಗ್ ಪೇಪರ್‌ಗಳು ಬಂದಿವೆ. ಅದರ ಬಗ್ಯೆಯೂ ಮಾಹಿತಿ ಕಲೆ ಹಾಕಿ, ಆಲ್ಬಂ ಮಾಡುವಾಗಲೂ ಹತ್ತು ಸಾರಿ ಮತ್ತೆ ಮತ್ತೆ ನೋಡುವಂತೆ ಅದನ್ನು ತಯಾರಿಸಬೇಕು. ಜೀವನದಲ್ಲಿ ಉತ್ತಮ ಶಿಸ್ತನ್ನು ಕೂಡಾ ಅಳವಡಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.
ಧರ್ಮಸ್ಥಳದಲ್ಲಿರುವ “ಮಂಜೂಷಾ” ವಸ್ತುಸಂಗ್ರಹಾಲಯದಲ್ಲಿ ೭೦೦ ಕ್ಯಾಮರಾಗಳು ಇವೆ. ಕ್ಯಾಮರಾಗಳ ಮೌಲ್ಯವರ್ಧನೆ ಹಾಗೂ ಮಾದರಿಗಳನ್ನು ಗಮನಿಸಿ ಬುದ್ಧಿವಂತಿಕೆಯಿಂದ ಪ್ರಗತಿ ಸಾಧಿಸಬೇಕು ಎಂದು ಹೆಗ್ಗಡೆಯವರು ತಿಳಿಸಿದರು.
“ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್ ರುಡ್‌ಸೆಟ್ ಬೆಳೆದು ಬಂದ ವಿಧಾನದ ಅವಲೋಕನ ಮಾಡಿದರು.
ಜಯರಾಮ ಮತ್ತು ಸಿದ್ದಾರ್ಥ ತರಬೇತಿಯ ಬಗ್ಯೆ ಅನಿಸಿಕೆ ವ್ಯಕ್ತಪಡಿಸಿದರು. ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ಮತ್ತು ಅತಿಥಿ ಉಪನ್ಯಾಸಕ ಸೂರ್ಯಪ್ರಕಾಶ್ ಉಪಸ್ಥಿತರಿದ್ದರು.
ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಕರುಣಾಕರ ಜೈನ್ ಧನ್ಯವಾದವಿತ್ತರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರ್ವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ