ಜಿಲ್ಲಾಧಿಕಾರಿಗಳೊಂದಿಗೆ ಮಂಜುನಾಥ ಭಂಡಾರಿ ಸಮಾಲೋಚನೆ
ಮಂಗಳೂರು: ದಶಕದಿಂದ ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ನಡೆಯುತ್ತಿದ್ದ ಕಂಬಳ ಸ್ಥಗಿತಗೊಂಡಿದ್ದು ಆ ಪರಿಸರದಲ್ಲಿ ಜರುಗುತ್ತಿದ್ದ ವಿವಿಧ ಕಾರ್ಯಕ್ರಮಗಳು ಕಳೆಗುಂದಿವೆ. ಆ ವೈಭವವನ್ನು ಮರು ಸ್ಥಾಪಿಸಲು ಈ ಕಾರ್ಯಕ್ರಮಗಳನ್ನು ರೂಪಿಸುವುದು ಸಮಯೋಚಿತವಾಗಿದೆ ಎಂದು ವಿಧಾನಪರಿಷತ್ ಶಾಸಕ ಎಂದು ಮಂಜುನಾಥ ಭಂಡಾರಿ ತಿಳಿಸಿದರು.
ಈ ವರ್ಷದ ನವಂಬರ್ 14 ರಿಂದ 18ರವರೆಗೆ "ಪಿಲಿಕುಳೋತ್ಸವ" ಹೆಸರಿನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಈ ಕೆಳಗಿನಂತೆ ಜಿಲ್ಲಾ ಸಾಂಸ್ಕೃತಿಕ ಉತ್ಸವ, ಕಾರ್ಯಕ್ರಮ ನಡೆಸಲು ಚಿಂತನೆ ನಡೆಸಲಾಗಿದೆ.
ಈ ಸಂಬಂಧ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ನವೆಂಬರ್ 14ರಂದು ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು ಮಕ್ಕಳಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳ ಹಾಗೂ ಮಕ್ಕಳ ಹಬ್ಬ ಆಯೋಜಿಸಲಾಗುವುದು.
ನವೆಂಬರ್ 15ರಿಂದ ಕೃಷಿ ಮತ್ತು ಜಾನುವಾರು ಮೇಳ, ನವೆಂಬರ್ 16 ರಂದು ಕೆಸರು ಗದ್ದೆಯಲ್ಲಿ ಜಿಲ್ಲಾ ಮಟ್ಟದ ಜಾನಪದ ಕ್ರೀಡಾ ಕಾರ್ಯಕ್ರಮಗಳು, ನವೆಂಬರ್ 17 ಮತ್ತು 18ರಂದು ಕಂಬಳ ಹಾಗೂ ಪ್ರತೀ ದಿನ ಸಂಜೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದು ಸೇರಿದಂತೆ ಹಲವು ಕಾರ್ಯಕ್ರಮ ನಡೆಸಲಾಗುವುದು.
ದಕ್ಷಿಣ ಕನ್ನಡ ಜಿಲ್ಲೆಯ ವಿನೂತನವಾದ ಈ ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನ ಸಭಾಧ್ಯಕ್ಷರು. ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು, ಚುನಾಯಿತ ಪ್ರತಿನಿಧಿಗಳು ಮತ್ತು ಕಂಬಳ ಸಮಿತಿಯೊಂದಿಗೆ ಚರ್ಚಿಸಿ ಕಾರ್ಯಕ್ರಮದ ರೂಪುರೇಖೆ ರಚಿಸಲಾಗುವುದು ಎಂದು ಮಂಜುನಾಥ ಭಂಡಾರಿ ತಿಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ