ಆ.25ರಂದು ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Upayuktha
0


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 2023-24ರ ಸಾಲಿನಲ್ಲಿ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕ ಗಳಿಸಿದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಆಗಸ್ಟ್ 25ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ   ಪತ್ರಿಕಾ ಭವನದಲ್ಲಿ ನಡೆಯಲಿದೆ.


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸುವರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರತಿಭಾ ಪುರಸ್ಕಾರ ನೆರವೇರಿಸುವರು.


ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top