ಪುತ್ತೂರು:ತಾಲೂಕು ಮಟ್ಟದ ಟೇಬಲ್​ ಟೆನ್ನಿಸ್​ ಪಂದ್ಯಾಟ - ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Upayuktha
0


ಪುತ್ತೂರು:
ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕೊಂಬೆಟ್ಟು ಇದರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಟೇಬಲ್​ ಟೆನ್ನಿಸ್​ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು. ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಬಾಲಕರ ತಂಡ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತದೆ.


 ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಶ್ರೇಯ ಎಮ್, ತೇಜಸ್ವಿನಿ ಪ್ರಶಾಂತ್​ ಕುಮಾರ್ ಹಾಗೂ  ದ್ವಿತೀಯ ಪಿಯುಸಿಯ ಪೂರ್ವಿ ಎಮ್​. ಎಸ್​, ವರ್ಷ ಗೌಡ ಕೆ.ಎಮ್​ ಭಾಗವಹಿಸಿದ್ದರು. ಬಾಲಕರ ತಂಡದಲ್ಲಿ  ದ್ವಿತೀಯ ಪಿಯುಸಿಯ  ಯಶಸ್​ಎಚ್​. ರಜನಿ, ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ  ತರುಣ್​. ಪಿ ರಾವ್​, ನಿಲನ್​ ಸಿ.ವಿ ರೈ ಮತ್ತು ಆರ್ ರೋಹಿತ್​ ಕುಮಾರ್​ ಭಾಗವಹಿಸಿದ್ದರು.​ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್​, ಡಾ.ಜ್ಯೋತಿ ಮತ್ತು ಯತೀಶ್​ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ.ವಿಜೇತ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 





إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top