ಪುತ್ತೂರು:ಅಂಬಿಕಾ ವಿದ್ಯಾಲಯ - ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Upayuktha
0


ಪುತ್ತೂರು:
ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹಬ್ಬದ ಆಚರಣೆಯ ಹಿನ್ನೆಲೆ ಹಾಗೂ ಮಹತ್ವವನ್ನು ಸಾರುವ ಸಲುವಾಗಿ, ಭಕ್ತಿ ಸಿಂಚನ ಕಾರ್ಯಕ್ರಮ ನಡೆಯಿತು. ಭಗವಧ್ಗೀತೆಯ ಪ್ರಥಮ ಅಧ್ಯಾಯದ ಪಠಣ, ಭಜನೆ ಹಾಡು, ಕುಣಿತ ಭಜನೆಗಳು ನಡೆದವು. ಮುದ್ದು ಕೃಷ್ಣ, ಮುದ್ದು ರಾಧೆಯರಿಗೆ ಆರತಿ ಬೆಳಗಿ, ತಿಲಕವಿಟ್ಟು ಹರಸಲಾಯಿತು.


ಕಾರ್ಯಕ್ರಮದ ಅಂಗವಾಗಿ ಶ್ರೀಕೃಷ್ಣನ ಚಿತ್ರಕ್ಕೆ ಬಣ್ಣ ಹಚ್ಚುವ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಕಿರೀಟ ತಯಾರಿ, ಮಡಕೆ ಚಿತ್ರಕಲೆ ಹಾಗೂ ಮೊಸರು ಕುಡಿಕೆ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಶಾಲಾ ಪ್ರಾಂಶುಪಾಲೆ ಮಾಲತಿ ಡಿ ಹಾಗೂ ಉಪ ಪ್ರಾಂಶುಪಾಲೆ ಸುಜನಿ ಬೋರ್ಕರ್  ಉಪಸ್ಥಿತರಿದ್ದರು. 10ನೇ ತರಗತಿಯ ಹಿತಾಲಿ ಪಿ ಶೆಟ್ಟಿ ಹಾಗೂ ಆದ್ಯ ಎಂ ಎ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top