ಪುತ್ತೂರು: ಮುಳಿಯ ಜ್ಯುವೆಲ್ಸ್ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆ.11ರಂದು ಬೆಳಗ್ಗೆ 10ರಿಂದ ಸ್ವಾತಂತ್ರ್ಯ ಹೋರಾಟಗಾರರ ಛದ್ಮವೇಷ ಸ್ಪರ್ಧೆಯನ್ನು ನಡೆಸಲಾಗುತ್ತಿದ್ದು, ಇದು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ.
ಛದ್ಮವೇಷ 3 ರಿಂದ 7 ವರ್ಷ ಮತ್ತು 8 ರಿಂದ 12 ವರ್ಷಗಳ ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯನ್ನು ಝೂಮ್ ಆಪ್ ಮೂಲಕ ನಡೆಸಲಾಗುವುದು. ಸ್ಪರ್ಧಿಗಳು ಮನೆಯಿಂದಲೇ ವೇಷ ಭೂಷಣಗಳನ್ನು ಧರಿಸಿ ಮುಳಿಯ ಜ್ಯುವೆಲ್ಸ್ ಝೂಮ್ ಲಿಂಕ್‌ನಲ್ಲಿ ಭಾಗವಹಿಸಬೇಕಾಗಿದೆ. ಪ್ರತಿ ಸ್ಪರ್ಧಿಗೆ 2 ನಿಮಿಷಗಳ ಕಾಲಾವಕಾಶವನ್ನು ನೀಡಲಾಗುತ್ತಿದ್ದು, ನೃತ್ಯ, ಡೈಲಾಗ್, ಹಿನ್ನಲೆ ಸಂಗೀತಗಳನ್ನು ಬಳಸಿಕೊಳ್ಳಬಹುದಾಗಿದೆ. ಭಾಗವಹಿಸುವ ಸ್ಪರ್ಧಿಗಳು ಆ.8ರ ಒಳಗಾಗಿ ಹೆಸರನ್ನು 9353030916 ಮೂಲಕ ನೋಂದಾಯಿಸಿಕೊಳ್ಳಬೇಕಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ