ಪುತ್ತೂರು: ಸಾಹಿತ್ಯ ಕ್ಷೇತ್ರದ ಸಾಧನೆ ಮಾಡಿರುವ ಅವಿನಾಶ್ ಕೊಡಂಕಿರಿ, ಪರೀಕ್ಷಿತ್ ತೋಳ್ಪಾಡಿ (ಅನುಪಸ್ಥಿತಿ), ನಾಟಿ ವೈದ್ಯೆ ಶ್ರೀಮತಿ ಯಮುನಾ ಪೂಜಾರಿ, ಜಾನಪದ ಕ್ಷೇತ್ರದ ಸುಧಾಕರ್ ಕುಲಾಲ್, ಶಿಕ್ಷಣ ಕ್ಷೇತ್ರದ ಶ್ರೀಮತಿ ಸವಿತಾ ಕುಮಾರಿ ಎಂ.ಡಿ, ಕಲೆ ಮತ್ತು ಸಾಹಿತ್ಯ ಕ್ಷೇತ್ರದ ವಿದ್ವಾನ್ ಗೋಪಾಲಕೃಷ್ಣ, ಸಾಹಿತ್ಯ, ವೈದ್ಯಕೀಯ ಮತ್ತು ಜನಜಾಗೃತಿ ಕ್ಷೇತ್ರದ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ, ಕೃಷಿ ಕ್ಷೇತ್ರದ ಸಾಧನೆಗಾಗಿ ಜಯರಾಮ ಕೆದಿಲಾಯ, ಹೈನುಗಾರಿಕೆ ಕ್ಷೇತ್ರದ ಸಾಧನೆಗಾಗಿ ಜಯಗುರು ಹಿಂದಾರು (ಅನುಪಸ್ಥಿತಿ), ಶಿಕ್ಷಣ, ಕಲೆ ಮತ್ತು ಪರಿಸರ ಜಾಗೃತಿಯಲ್ಲಿ ಮಾಡಿರುವ ಸಾಧನೆಗಾಗಿ ತಾರಾನಾಥ್ ಪಿ. ಸವಣೂರು ಹತ್ತು ಜನ ಸಾಧಕರನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿಯವರು ಅಭಿನಂದಿಸಿ ಶುಭ ಹಾರೈಸಿದರು.
ಹೀಗೆ 16 ಗ್ರಾಮ ಸಾಹಿತ್ಯ ಸಂಭ್ರಮದ ಮೂಲಕ ಒಟ್ಟಿಗೆ 101 ಸಾಧಕರನ್ನು ಗುರುತಿಸಿ ಗೌರವಿಸಿದ ಸಾರ್ಥಕ್ಯ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿಗೆ ಸಲ್ಲುತ್ತದೆ. ಅಭಿನಂದನಾ ಕಾರ್ಯಕ್ರಮದ ವಿಶೇಷತೆ ಎಂದರೆ, ಹಾರ ತುರಾಯಿ ಫಲದ ಬದಲಿಗೆ ಕನ್ನಡ ಪೇಟ- ಕನ್ನಡ ಶಾಲು- ಪುಸ್ತಕಗಳು- ಅಭಿನಂದನಾ ಫಲಕ ನೀಡಿ ಗೌರವಿಸುವ ಸಂಪ್ರದಾಯವನ್ನು ಅಳವಡಿಸಿಕೊಳ್ಳಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ