ಹೋರಾಟ, ಬಲಿದಾನಗೈದವರನ್ನು ಸ್ಮರಿಸುವ ದಿನ ಸ್ವಾತಂತ್ರ್ಯೋತ್ಸವ: ನವೀನ್ ಭಂಡಾರಿ
ಪುತ್ತೂರು: ದೇಶದ ಸ್ವಾತಂತ್ರ್ಯಕ್ಕಾಗಿ ಅದೆಷ್ಟೋ ಹೋರಾಟಗಳನ್ನು, ಬಲಿದಾನಗಳನ್ನು ನಡೆಸಿದ ಕಾರಣ ಭಾರತಕ್ಕೆ ಸ್ವಾತಂತ್ರ್ಯ ಪ್ರಾಪ್ತಿಯಾಯಿತು. ಈ ದಿನದಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ದಿನವಾಗಿದೆ ಎಂದು ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಅಭಿಪ್ರಾಯಪಟ್ಟರು.
ಅವರು 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪುತ್ತೂರು ತಾಲೂಕು ಪಂಚಾಯತ್ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಮ್ಮ ದೇಶ ಆರೋಗ್ಯ, ಶಿಕ್ಷಣ, ಆಯುರ್ವೇದ ಹೀಗೆ ಹಲವು ಕ್ಷೇತ್ರಗಳಲ್ಲಿ ಮುಂದುವರೆಯುತ್ತಿರುವುದು ನಮಗೆ ಹೆಮ್ಮೆಯ ವಿಷಯ. ಇವುಗಳನ್ನು ಮುಂದಿನ ಪೀಳಿಗೆಯವರು ಮುಂದುವರೆಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು. ಕೊಂಬೆಟ್ಟು ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳು ಧ್ವಜ ಗೀತೆ ಹಾಗೂ ರಾಷ್ಟ್ರ ಗೀತೆಯನ್ನು ಹಾಡಿದರು.
ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರು (ಗ್ರಾ.ಉ.) ಶೈಲಜಾ ಭಟ್, ನಿವೃತ್ತ ಸೇನಾನಿ ಹಾಗೂ ತಾ.ಪಂ. ಸಿಬ್ಬಂದಿ ರವಿಚಂದ್ರ, ತಾ.ಪಂ. ವ್ಯವಸ್ಥಾಪಕ ಜಯಪ್ರಕಾಶ್, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಯುವ ಸಬಲೀಕರಣ ಕ್ರೀಡಾ ಮೇಲ್ವಿಚಾರಕ ಶ್ರೀಕಾಂತ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ