ಪುತ್ತೂರು: ಪದವಿ ಪ್ರದಾನ ಕಾರ್ಯಕ್ರಮ

Upayuktha
0


ಪುತ್ತೂರು:
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭವು ಆಗಸ್ಟ್ 24 ಶನಿವಾರದಂದು ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ. 2023-24ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್  ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಇಲ್ಲಿ ಪದವಿ ಪ್ರಧಾನ ಮಾಡಲಾಗುತ್ತದೆ. 


ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ 3ನೇ ರ‍್ಯಾಂಕ್ ಗಳಿಸಿರುವ ಕೇಶವ ಪ್ರಜ್ವಲ್.ಪಿ ಹಾಗೂ 5ನೇ ರ‍್ಯಾಂಕ್ ಗಳಿಸಿರುವ ಕೆ.ಪಲ್ಲವಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮವೂ ನಡೆಯುತ್ತದೆ.


ಅಂದು ಬೆಳಿಗ್ಗೆ 10.30ಕ್ಕೆ ನಡೆಯುವ ಈ ಸಮಾರಂಭಕ್ಕೆ ಪುತ್ತೂರು ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್, ವಿವೇಕಾನಂದ ಕಾಲೇಜ್ ಆಫ್  ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿ ಕನಿಷ್ಕ.ಎಸ್.ಚಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು ಮತ್ತು ವಿಭಾಗ ಮುಖ್ಯಸ್ಥರು ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ ಪ್ರಸನ್ನ.ಕೆ. ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top