ಪುತ್ತೂರು:ಶಟಲ್‌ ಬ್ಯಾಡ್ಮಿಂಟನ್‌- ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ

Chandrashekhara Kulamarva
0


ಪುತ್ತೂರು:ಅಂಬಿಕಾ ಪದವಿಪೂರ್ವ ಕಾಲೇಜು ಇದರ ಸಹಯೋಗದಲ್ಲಿ ಸುದಾನ ಸ್ಪೋರ್ಟ್ಸ್ ಕ್ಲಬ್‌ ಸಾಮೆತ್ತಡ್ಕ, ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಶಟಲ್‌ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ. 


ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ನೇಹಶ್ರೀ, ಪುಲಕಿತ ಹಾಗೂ ದ್ವಿತೀಯ ಪಿಯುಸಿಯ  ಹರ್ಷಿತ ಭಾಗವಹಿಸಿದ್ದರು. ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನ್ವಿತ್‌ ರೈ, ಅಕ್ಷಯ್‌ ಹಾಗೂ ದ್ವಿತೀಯ ಪಿಯುಸಿಯ ಯಶಸ್‌.ಎಚ್‌. ರಜನಿ, ಯಶಸ್ವಿನ್‌. ಡಿ ಭಾಗವಹಿಸಿದ್ದರು. 


ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು  ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter



إرسال تعليق

0 تعليقات
إرسال تعليق (0)
To Top