ಮುಜುಂಗಾವು ಶ್ರೀ ಭಾರತೀ ವಿದ್ಯಾ ಪೀಠದಲ್ಲಿ ರಕ್ಷಾ ಬಂಧನ

Chandrashekhara Kulamarva
0

ಕುಂಬಳೆ: ಶ್ರೀ ಭಾರತಿ ವಿದ್ಯಾಪೀಠ ಮುಜುಂಗಾವಿನಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಸಮಿತಿಯ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ 'ಸಹೋದರ- ಸಹೋದರಿಯರ ನಡುವಿನ ಭಾಂದವ್ಯದ 'ಕುರಿತು ಮಾತನಾಡಿ  ವಿದ್ಯಾರ್ಥಿಗಳು ಹೇಗಿರಬೇಕೆಂದು ತಮ್ಮ ‌ಮಾತುಗಳಲ್ಲಿ ತಿಳಿ ಹೇಳಿದರು.


ವಿದ್ಯಾರ್ಥಿಗಳು ಪರಸ್ಪರ ರಾಖಿ ಕಟ್ಟಿ ಸಿಹಿ ಸವಿದು ರಕ್ಷಾಬಂಧನ ದಿನವನ್ನು ಆಚರಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಭಟ್ ಚೆಕ್ಕಣಿಕೆ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ದರ್ಭೆರ್ಮಾರ್ಗ, ಸಹ ಮುಖ್ಯ ಶಿಕ್ಷಕಿ ಶ್ರೀಮತಿ ಚಿತ್ರಾ ಸರಸ್ವತಿ ಹಾಗೂ ಅಧ್ಯಾಪಕವೃಂದ  ಉಪಸ್ಥಿತರಿದ್ದರು. ಶ್ರೀಮತಿ ಸೌಮ್ಯ ಕಾರ್ಯಕ್ರಮವನ್ನು ನಡೆಸಿಕೊಟ್ಟರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top