ಸಾಧಕ ಛಾಯಾಗ್ರಹಕ ರಾಮಕೃಷ್ಣ ರೈ ಗೆ ಸನ್ಮಾನ
ಉಜಿರೆ : ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಆನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ವಿಶ್ವ ಛಾಯಾಗ್ರಹಣ ದಿನವನ್ನು ಉಜಿರೆಯ ರಶ್ಮೀ ಫೋಟೋ ಸ್ಟುಡಿಯೋದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಛಾಯಾಗ್ರಾಹಕನಾಗಿ ಸುಮಾರು 25 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿರುವ ರಾಮಕೃಷ್ಣ ರೈ ರವರನ್ನು ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಆನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್, ರೋಟೆರಿಯನ್ ಶ್ರೀಧರ ಕೆ.ವಿ, ರೋಟೆರಿಯನ್ ಪ್ರಶಾಂತ ಜೈನ್ ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್, ಕಾರ್ಯದರ್ಶಿ ಡಾ.ವಿನಯಾ ಕಿಶೋರ್, ಡಾ.ಭಾರತಿ ಜಿ.ಕೆ ಹಾಗೂ ಪುನೀತಾ ಪ್ರಭಾಕರ್ ಅವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ