ರೋಟರಿ ಬೆಳ್ತಂಗಡಿ: ಮಹಿಳಾ ಆರೋಗ್ಯ ಮತ್ತು ನೈರ್ಮಲ್ಯತೆಯ ಅರಿವು
ಉಜಿರೆ :ಮಹಿಳೆಯರಲ್ಲಿ ಹಾರ್ಮೋನಲ್ ಇಂಬ್ಯಾಲೆನ್ಸ್ ದೇಹದ ಸಹಜ ಕ್ರಿಯೆ, ಇವುಗಳಿಂದ ವಿಚಲಿತರಾಗುವ ಬದಲು ಆರೋಗ್ಯ ಮತ್ತು ನೈರ್ಮಲ್ಯ ಕಡೆಗೆ ಕಾಳಜಿ ವಹಿಸಿ. ಸೇವಿಸುವ ಆಹಾರ ಪದಾರ್ಥಗಳು ಕೂಡ ನಮ್ಮ ದೇಹದ ಅಸಮಾತೋಲನಕ್ಕೆ ಕಾರಣವಾಗುತ್ತದೆ ಎಂದು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ವಿನಯ ಕಿಶೋರ್ ಅಭಿಪ್ರಾಯಪಟ್ಟರು.
ಇವರು ಬೆಳ್ತಂಗಡಿ ರೋಟರಿ ಕ್ಲಬ್ ಹಾಗು ಹ್ಯಾನ್ಸ್ ಕ್ಲಬ್ ವತಿಯಿಂದ ಶ್ರಿ.ಧ ಮ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ಶ್ರಿ.ಧ.ಮ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಇತ್ತೀಚೆಗಿನ ದಿನಗಳಲ್ಲಿ ಮಹಿಳೆಯರಲ್ಲಿ ಗರ್ಭಕೋಶದ ಹಾಗೂ ಗರ್ಭಕಂಠದ ಕ್ಯಾನ್ಸರ್ ಗಳು ಹೆಚ್ಚುತ್ತಿವೆ. ಇದರ ಮುಂಜಾಗೃತೆಗಾಗಿ ವ್ಯಾಕ್ಸಿನೇಷನ್ ಮಾಡಿಸಿಕೊಳ್ಳಬೇಕು. ಆರೋಗ್ಯದ ಸುಸ್ಥಿರತೆಗೆ ನಾವು ಪ್ರಾಮುಖ್ಯತೆ ನೀಡಬೇಕು ಎಂದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿದ ಪಾಲಿಟೆಕ್ನಿಕ್ ವಿದ್ಯಾರ್ಥಿನಿಯರು ಕೇಳಿದ ಹಲವು ಪ್ರಶ್ನೆ ಮತ್ತು ಸಂಶಯಗಳಿಗೆ ಡಾ. ವಿನಯ ಕಿಶೋರ್ ಉತ್ತರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರಿ.ಧ.ಮ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಸಂತೋಷ್ ವಹಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್, ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್, ಸದಸ್ಯೆ ಪವಿತ್ರಾ, ಶ್ರಿ.ಧ.ಮ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಯೋಜನಾಧಿಕಾರಿ ಪ್ರಕಾಶ್, ಯುವ ರೆಡ್ ಕ್ರಾಸ್ ಕ್ಲಬ್ ಯೋಜನಾಧಿಕಾರಿ ಅವನೀಶ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಹಾಗು ಉಪನ್ಯಾಸಕರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಭವಿತ ನಿರೂಪಿಸಿ , ವಿದ್ಯಾರ್ಥಿನಿ ಸಾಯಿ ಪ್ರಿಯ ವಂದಿಸಿದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಆನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶ್ರೀ.ಧ.ಮ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಸಂತೋಷ್ ರವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ