ಉಜಿರೆ:ಉಜಿರೆಯ ಶ್ರೀ ಧ. ಮಂ. ಸ್ವಾಯತ್ತ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು ಹಾಗೂ ಆರೋಗ್ಯ ಇಲಾಖೆ, ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಡೆಂಗ್ಯೂ ಜ್ವರ ಕುರಿತು ಜಾಗೃತಿ ಕಾರ್ಯಕ್ರಮ ಆ.1 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿ, ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿ ಕಛೇರಿಯ ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಕ್ಷಿತ್ ಆರ್. ಮಾತನಾಡಿ, ಡೆಂಗ್ಯೂ ಜ್ವರದ ಲಕ್ಷಣಗಳ ಕುರಿತು ಮಾಹಿತಿ ನೀಡಿದರು.
"ಹೆಚ್ಚಿನ ಪೌಷ್ಟಿಕ ಆಹಾರ ಸೇವನೆ, ವಿಟಮಿನ್ ಸಿ ಅಂಶವುಳ್ಳ ಹಣ್ಣು ತಿನ್ನುವುದರ ಮೂಲಕ ಮನೆಯಲ್ಲೇ ಡೆಂಗ್ಯೂ ಜ್ವರಕ್ಕೆ ಮದ್ದು ಮಾಡಬಹುದು. ಸಣ್ಣ ಸೊಳ್ಳೆಯಿಂದ ಡೆಂಗ್ಯೂ ಹರಡಿದರೂ ಸಹ ಹಲವಾರು ಬದಲಾವಣೆಯನ್ನು ಮಾಡುತ್ತದೆ. ಡೆಂಗ್ಯೂ ಎನ್ನುವುದು ವಾಸ್ತವದಲ್ಲಿ ಸರಳ, ಅದನ್ನು ಸರಿಯಾಗಿ ಅರ್ಥೈಸಿಕೊಳ್ಳಬೇಕು. ರೋಗ ಬಂದ ನಂತರ ಔಷಧ ಹುಡುಕುವುದಕ್ಕಿಂತ ಅದಕ್ಕೂ ಮುಂಚಿತವಾಗಿ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ" ಎಂದರು.
“ಮನೆಯ ಸುತ್ತಮುತ್ತ ಎಷ್ಟೋ ಕಡೆಗಳಲ್ಲಿ ನಮಗೆ ತಿಳಿಯದೇ ನೀರು ನಿಲ್ಲಲು ದಾರಿ ಮಾಡಿಕೊಟ್ಟು, ಸೊಳ್ಳೆಗಳ ಸಂತಾನೋತ್ಪತ್ತಿಗೆ ನಾವೇ ಅನುವು ಮಾಡಿ ಕೊಡುತ್ತಿದ್ದೇವೆ. ಕಸವನ್ನು ಸಮರ್ಪಕವಾಗಿ ನಿರ್ವಹಿಸುವುದರ ಮೂಲಕ ಡೆಂಗ್ಯೂ ಹರಡದಂತೆ ಮಾಡಬಹುದು. ಬೇವಿನ ಎಣ್ಣೆ ಹಚ್ಚಿಕೊಳ್ಳುವುದು, ಸಂಜೆಯ ಸಮಯದಲ್ಲಿ ಅಡಿಕೆ ಸಿಪ್ಪೆಯ ಹೊಗೆ ಹಾಕುವುದು ಮುಂತಾದವುಗಳ ಮೂಲಕ ಡೆಂಗ್ಯೂ ತಡೆಗಟ್ಟಬಹುದು. ವಿದ್ಯಾರ್ಥಿಗಳಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜವಾಬ್ದಾರಿ ನಿಮ್ಮದು" ಎಂದು ಅವರು ಕಿವಿಮಾತು ಹೇಳಿದರು.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಅವರು ಎನ್ನೆಸ್ಸೆಸ್ ಸ್ವಯಂಸೇವಕರಿಗೆ ಡೆಂಗ್ಯೂ ಕುರಿತು ರಸಪ್ರಶ್ನೆ ಕಾರ್ಯಕ್ರಮ ನಿರ್ವಹಿಸಿದರು.
ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿ ಕಛೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸೋಮನಾಥ್ ಎಸ್.ಆರ್., ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪುಷ್ಪಾ, ಎಸ್.ಡಿ.ಎಂ. ಕಾಲೇಜು ಎನ್ನೆಸ್ಸೆಸ್ ಯೋಜನಾಧಿಕಾರಿ ಪ್ರೊ. ದೀಪಾ ಆರ್.ಪಿ. ಮತ್ತು ಸ್ವಯಂಸೇವಕರು ಉಪಸ್ಥಿತರಿದ್ದರು. ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸ್ವಯಂಸೇವಕಿ ದೀಪಶ್ರೀ ವಂದಿಸಿ, ಚಿಂತನಾ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ