ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ನಡೆದ ಸಿ.ಎ ಕೋರ್ಸಿನ ಮಾಹಿತಿ ಕಾರ್ಯಕ್ರಮವನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಅವರು ಉದ್ಘಾಟಿಸಿದರು.
ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಮಂಗಳೂರು ವಿಭಾಗದ ಸಿ.ಎ ಗೌತಮ್ ಮತ್ತು ಸಿ.ಎ ನಂದನ್ ರಾವ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಸಿ.ಎ ಕೋರ್ಸಿನ ಮಹತ್ವ, ಅಧ್ಯಯನ ಹಾಗೂ ಅವಕಾಶಗಳ ಬಗ್ಗೆ ಮಾತನಾಡಿದರು.
ಎಸ್‌ಡಿಎಂ ಸ್ವಾಯತ್ತ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ಉಪಸ್ಥಿತರಿದ್ದರು.
ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಸ್ವಾಗತಿಸಿದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ಸೀಮಾ ಕಾರ್ಯಕ್ರಮ ನಿರೂಪಿಸಿ, ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಮನಮೋಹನ್ ನಾಯ್ಕ್ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ