ಎಸ್‌ಡಿಎಂ ಪದವಿಪೂರ್ವ ಕಾಲೇಜು: ಸಿ.ಎ ಸಾಧಕರಿಗೆ ಸನ್ಮಾನ

Upayuktha
0




ಉಜಿರೆ: ಪ್ರಸಕ್ತ ವರ್ಷದಲ್ಲಿ ಅಖಿಲ ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ನಡೆಸಿದ ಸಿ.ಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ. ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಸಿ.ಎ ಅಶ್ವಥ್, ಸಿ.ಎ ಸುಕನ್ಯಾ ಕಾಮತ್, ಸಿ.ಎ ಕೇಶವ್ ಕಾಮತ್, ಮತ್ತು ಸಿ.ಎ ಮೆಘೇಶ್ ಇವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 


ಗುರಿ, ಪರಿಶ್ರಮ ದಿಂದ ಸಾಧನೆಯನ್ನು ಮಾಡಬಹುದು. ಅದೇ ರೀತಿ ಸೋತಾಗ ಆತ್ಮ ವಿಶ್ವಾಸ ಕಳೆದು ಕೊಳ್ಳಬಾರದು ಎಂದು ಸಿ.ಎ ಸಾಧಕ ಹಿರಿಯ ವಿದ್ಯಾರ್ಥಿಗಳು ಈಗಿನ ಪಿಯುಸಿಯ ಸಿ.ಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.


ಕಾರ್ಯಕ್ರಮದ ಆಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ ಇವರು ಸಾಧಕರನ್ನು ಸನ್ಮಾನಿಸಿ ಶುಭ ಹಾರೈಸಿದರು. ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ದ್ವಿತೀಯ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಾದ ಭಾರ್ಗವಿ ಭಟ್ ನಿರೂಪಿಸಿ, ಕೃತಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top