ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಪದ ಪ್ರದಾನ

Upayuktha
1 minute read
0

ಉಜಿರೆ: 'ಗುರುಗಳ ಸೂಕ್ತ ಮಾರ್ಗದರ್ಶನದೊಂದಿಗೆ ನಿಮ್ಮ ನಾಯಕತ್ವ ಗುಣ ಬೆಳೆಯಲಿ, ಮುಂದೆ ಭವಿಷ್ಯದಲ್ಲಿ ಕೃಷಿ, ವ್ಯವಹಾರ, ರಾಜಕಾರಣ ಇತ್ಯಾದಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಭರವಸೆಯ ನಾಯಕರಾಗಿ ಗುರುತಿಸಿಕೊಳ್ಳಿ. ಪ್ರಾಮಾಣಿಕವಾಗಿ ಪ್ರಯತ್ನಿಸಿದಾಗ ಯಶಸ್ಸು ಸಿಕ್ಕೇ ಸಿಗುತ್ತದೆ' ಎಂದು ಮೂಡುಬಿದಿರೆಯ ನ್ಯಾಯವಾದಿ ಹಾಗೂ ನೋಟರಿ ಶ್ವೇತಾ ಜೈನ್ ಹೇಳಿದರು. 


ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ನೆರವೇರಿಸಿ ಮಾತನಾಡಿದರು. 


ಈ ಸಂದರ್ಭದಲ್ಲಿ ಹಲವು ಸಾಧಕರ ಉದಾಹರಣೆಯೊಂದಿಗೆ ವಿದ್ಯಾರ್ಥಿಗಳಿಗೆ ಪ್ರೇರಣೆಯನ್ನು ನೀಡಿದರು. ವಿದ್ಯಾರ್ಥಿ ಪ್ರತಿನಿಧಿಗಳಿಗೆ ಗುರುತು ಪತ್ರವನ್ನು ವಿತರಿಸಿ ಶುಭ ಹಾರೈಸಿದರು. 


ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಅವರು ತರಗತಿ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ 'ನಾಯಕನಾದವನು ಮೊದಲು ತಾನು ಉತ್ತಮ ಶಿಸ್ತು ಮತ್ತು ವ್ಯಕ್ತಿತ್ವವನ್ನು ಹೊಂದಿ ಇತರರಿಗೆ ಪ್ರೇರಣೆಯಾಗಬೇಕು' ಎಂದು ಹೇಳಿದರು.


ಉಪ ಪ್ರಾಂಶುಪಾಲ ಡಾ.ರಾಜೇಶ್ ಬಿ. ಸ್ವಚ್ಛತಾ ಸೇನಾನಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಶುಭ ಕೋರಿದರು. ವಿದ್ಯಾರ್ಥಿನಿ ಆತ್ಮಿ ಅವರು ಪರಿಚಯ ಮಾಡಿದರು. ಅನುಶ್ರೀ ನಿರೂಪಿಸಿ, ಯುಕ್ತಾ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top