ಶಿವಮೊಗ್ಗ:ಶಿವಮೊಗ್ಗದ ಪ್ರಜ್ಞಾ ಬುಕ್ ಗ್ಯಾಲರಿಯು ಪ್ರಾರಂಭದಿಂದಲೂ ಓದುಗರಿಗಾಗಿ ವಿಭಿನ್ನ ರೀತಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಇದೇ ಆಗಸ್ಟ್ 17 ಶನಿವಾರದಂದುದಂದು ಸಂಜೆ 6 ಗಂಟೆಗೆ ನಾಡಿನ ಖ್ಯಾತ ಕವಿ, ಬರಹಗಾರರಾದ ಶ್ರೀ ಯುತ ಜಯಂತ್ ಕಾಯ್ಕಿಣಿಯವರೊಂದಿಗೆ ಓದುಗರ ಮಾತುಕತೆ, ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಮಲ್ಲಿಕಾರ್ಜುನ ಚಿತ್ರಮಂದಿರದ ಹತ್ತಿರವಿರುವ ಪ್ರಜ್ಞಾ ಬುಕ್ ಗ್ಯಾಲರಿಯಲ್ಲಿಯೇ ನಡೆಯಲಿದೆ.
ಮೊದಲು ಬಂದವರಿಗೆ ಆದ್ಯತೆಯಿದ್ದು ಕಾರ್ಯಕ್ರಮದ ಪಾಸ್ ಗಳನ್ನು ಪ್ರಜ್ಞಾ ಬುಕ್ ಗ್ಯಾಲರಿಯಲ್ಲಿ ಪಡೆಯಬಹುದಾಗಿದೆ. ಶಿವಮೊಗ್ಗದ ಯುವ ಜನರು ಹಾಗೂ ಸಾಹಿತ್ಯಸಾಕ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ವಿನೂತನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ
7411272835, 9844661726 ರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ