ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ

Upayuktha
0

ಮುಜುಂಗಾವು: ಶ್ರೀ ಭಾರತೀ ವಿದ್ಯಾಪೀಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.ಕಾರ್ಯಕ್ರಮದ ಅತಿಥಿಗಳಾದ ಅಭಿಷೇಕ್ ಮಹೇಶ್, ಅಭಿರಾಮ ಸೂರಂಬೈಲು ದೀಪ ಪ್ರಜ್ವಲನೆಗೈದು ಕಾರ್ಯಕ್ರಮ ಉದ್ಘಾಟಿಸಿ, ಶ್ರೀಕೃಷ್ಣನ ಬಾಲಲೀಲೆಗಳನ್ನು ವರ್ಣಿಸುತ್ತಾ ಅವನ ಸಂದೇಶವು ನಮ್ಮ ಜೀವನವನ್ನು ಪಾವನಗೊಳಿಸಲಿ ಎಂಬ ಸದಾಶಯ ವ್ಯಕ್ತಪಡಿಸಿದರು.


ಶಿಶುಮಂದಿರದ ಪುಟಾಣಿಗಳು ಮುದ್ದುಕೃಷ್ಣರಾಗಿ ನೆರೆದವರ ಮನಸ್ಸಿಗೆ ಮುದ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಿತು. ಕೃಷ್ಣಾಷ್ಟಮಿ ಪ್ರಯುಕ್ತ ನಡೆಸಿದ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ ಅಧ್ಯಕ್ಷ ಸ್ಥಾನ ವಹಿಸಿ ಶುಭ ಹಾರೈಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಭಟ್ ಚೆಕ್ಕಣಿಕೆ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ಧರ್ಬೆ ಮಾರ್ಗ, ಸಹಮುಖ್ಯ ಶಿಕ್ಷಕಿ ಶ್ರೀಮತಿ ಚಿತ್ರಾ ಸರಸ್ವತಿ ಪೆರಡಾನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಅಧ್ಯಾಪಿಕೆ ಶ್ರೀಮತಿ ಶ್ರೀದೇವಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿಯರಾದ ಚಿತ್ತಾರ ಸ್ವಾಗತಿಸಿ, ಲಿಶಿತಾ ಧನ್ಯವಾದಗೈದರು. ಕೊನೆಯಲ್ಲಿ ಸಿಹಿತಿಂಡಿಯನ್ನು ವಿತರಿಸಲಾಯಿತು.


Post a Comment

0 Comments
Post a Comment (0)
To Top