ಮುಕ್ಕ: ಶ್ರೀನಿವಾಸ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಇದರ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಅಸೋಸಿಯೇಶನ್ ಆಫ್ ಕಂಪ್ಯೂಟರ್ ಇಂಜಿನಿಯರಿಂಗ್ ವಿಭಾಗವು ಆ.20ರಂದು ಉದ್ಘಾಟನೆಗೊಂಡಿತು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಎನ್ಐಟಿಕೆಯ ಸಿಎಸ್ಇ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮೋಹಿತ್ ಪಿ. ತಹಿಲಿಯಾನಿ, ಶ್ರೀನಿವಾಸ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಡೀನ್ ಡಾ. ರಾಮಕೃಷ್ಣ ಹೆಗ್ಡೆ, ಸಿಎಸ್ಇ ಮುಖ್ಯಸ್ಥೆ ಪ್ರೊ. ಶಿಫಾನಾ ಬೇಗಮ್, ಸಂಯೋಜಕಿ ವರ್ಷಾ ಜಿ. ಬಂಗೇರಾ ಹಾಗೂ ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಿಎಸ್ಇ ವಿಭಾಗವು ವಿದ್ಯಾರ್ಥಿಗಳಿಗೆ ತಮ್ಮ ತಾಂತ್ರಿಕ ಕೌಶಲ್ಯಗಳನ್ನು ಹೆಚ್ಚಿಸಲು, ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳಲು ಮತ್ತು ವಿವಿಧ ತಾಂತ್ರಿಕ ಮತ್ತು ತಾಂತ್ರಿಕೇತರ ಚಟುವಟಿಕೆಗಳಲ್ಲಿ ಸಹಕರಿಸಲು ಪ್ರೇರೇಪಿಸುವ ವಾತಾವರಣವನ್ನು ಕಲ್ಪಿಸುವುದಾಗಿದೆ.
ಡಾ. ಮೋಹಿತ್ ಪಿ. ತಹಿಲಿಯಾನಿ ಅವರು ತಂತ್ರಜ್ಞಾನದ ವೇಗ ಬದಲಾವಣೆಯ ಮತ್ತು ಕಂಪ್ಯೂಟರ್ ಸೈನ್ಸ್ ಇಂಜಿನಿಯರ್‌ಗಳ ಪಾತ್ರದ ಬಗ್ಗೆ ವಿವರಿಸಿದರು. ಹಾಗೂ ಎಸಿಇ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಲು ಪ್ರೋತ್ಸಾಹಿಸಿದರು. ತಂತ್ರಜ್ಞಾನದ ವೇಗದ ಪ್ರಗತಿ ಮತ್ತು ಭವಿಷ್ಯವನ್ನು ರೂಪಿಸುವಲ್ಲಿ ಕಂಪ್ಯೂಟರ್ ಸೈನ್ಸ್ ಎಂಜಿನಿಯರ್‌ಗಳ ಮಹತ್ವದ ಪಾತ್ರದ ಬಗ್ಗೆ ವಿವರಿಸಿದರು.
ಡೀನ್ ಡಾ. ರಾಮಕೃಷ್ಣ ಹೆಗ್ಡೆ ಮಾತನಾಡಿ, ತಂತ್ರಜ್ಞಾನ ಕ್ಷೇತ್ರದಲ್ಲಿ ನಿರಂತರ ಕಲಿಕೆಯ ಮಹತ್ವ ಮತ್ತು ಹೊಸ ಸವಾಲುಗಳಿಗೆ ಹೊಂದಿಕೊಳ್ಳುವ ಅಗತ್ಯವನ್ನು ಹಂಚಿಕೊಂಡರು. ಅಸೋಸಿಯೇಶನ್ ಪ್ರಮಾಣ ವಚನವನ್ನು ಪ್ರೊ. ಶಿಫಾನಾ ಬೇಗಮ್ ಅವರು ಬೋಧಿಸಿದರು. ಎಸಿಇ ವಾರ್ಷಿಕ ವರದಿಯನ್ನು ಎಸಿಇ ಅಂತಿಮ ವರ್ಷದ ವಿದ್ಯಾರ್ಥಿನಿ ದಿವ್ಯ ನಾಕ್ ವಿವರಿಸಿದರು. ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳ ಪಟ್ಟಿಯನ್ನು ಎಸಿಇ ಸಂಯೋಜಕಿ ಪ್ರೊ. ವರ್ಷಾ ಜಿ. ಬಂಗೇರಾ ಪ್ರಸ್ತುತ ಪಡಿಸಿದರು.
ಸಿಎಸ್ ಇ ಅಂತಿಮ ವರ್ಷದ ವಿದ್ಯಾರ್ಥಿ ನವನೀತ್ ಕೃಷ್ಣ ಕೆ ಸ್ವಾಗತಿಸಿ, ಆಕಾಶ್ ಕುಲಾಲ್ ಅತಿಥಿಗಳನ್ನು ಪರಿಚಯಿಸಿದರು. ಎಸಿಇ ಅಂತಿಮ ವರ್ಷದ ವಿದ್ಯಾರ್ಥಿ ಕಿರಣ್ ಕುಮಾರ್ ವಂದಿಸಿದರು.
ಕಾರ್ಯಕ್ರಮದ ಬಳಿಕ ಉಡುಪಿ ವೆಬ್ ಸೊಲ್ಯೂಶನ್ಸ್ ಇದರ ಸಾಫ್ಟ್‌ವೇರ್ ಇಂಜಿನಿಯರ್ ಸ್ತುತಿ ಭಟ್ ಅವರಿಂದ ಡೇಟಾ ಸೈನ್ಸ್ ಕುರಿತು ಉಪನ್ಯಾಸ ನಡೆಯಿತು. ಡೇಟಾ ಸೈನ್ಸ್ ಹಾಗೂ ಅದರ ಅನ್ವಯಗಳು, ಸವಾಲುಗಳು ಮತ್ತು ಭವಿಷ್ಯದ ಸಾಧ್ಯತೆಗಳನ್ನು ಒಳಗೊಂಡಂತೆ ವಿದ್ಯಾರ್ಥಿಗಳಿಗೆ ಮೌಲ್ಯಯುತ ಮಾಹಿತಿಯನ್ನು ಒದಗಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ