ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

Upayuktha
0


ಮಂಗಳೂರು:
ಶ್ರೀನಿವಾಸ ವಿಶ್ವವಿದ್ಯಾಲಯ ಪಾಂಡೇಶ್ವರ ಕ್ಯಾಂಪಸ್‌ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು 2023ರ ಆಗಸ್ಟ್ 15ರಂದು ಸಂಭ್ರಮ ಮತ್ತು ದೇಶಭಕ್ತಿಯಿಂದ ಆಚರಿಸಲಾಯಿತು.


ಕಾರ್ಯಕ್ರಮದ ಗೌರವಾನ್ವಿತ ಮುಖ್ಯ ಅತಿಥಿ, ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲ್ ಕುಮಾರ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಮ್ಮಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿರುವುದರಿಂದ ನಾವು ಅತ್ಯಂತ ಭಾಗ್ಯಶಾಲಿಗಳು ಎಂದು ಹೇಳಿದರು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಕ್ಕೆ ಗೌರವವಾಗಿ ಮುಂದಿನ ಪೀಳಿಗೆಗೆ ಆರ್ಥಿಕವಾಗಿ, ತಾಂತ್ರಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಅವರು ಒತ್ತಾಯಿಸಿದರು.


ಡಾ.ಅಜಯ್ ಕುಮಾರ್, ರಿಜಿಸ್ಟ್ರಾರ್ ಆಫ್ ಡೆವಲಪ್‌ಮೆಂಟ್, ಶ್ರೀನಿವಾಸ ವಿಶ್ವವಿದ್ಯಾಲಯ, ಡಾ.ವೆಂಕಟೇಶ್ ಅಮೀನ್, ಡೀನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್, ಡಾ. ರಾಜಶೇಖರ್ ಎಸ್. ಡೀನ್, ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ, ಡಾ. ಸುಬ್ರಹ್ಮಣ್ಯ ಭಟ್, ಡೀನ್, ಇನ್‌ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಮತ್ತು ಇನ್ಫಾರ್ಮಶನ್ ಸೈನ್ಸ್, ಪ್ರೊ. ಪ್ರಶಾಂತ್ ಪ್ರಭು, ಡೀನ್ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ & ಟೂರಿಸಂ, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 


ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಡೀನ್ ಡಾ.ಪದ್ಮನಾಭ ಬಿ. ಸ್ವಾಗತಿಸಿ, ಪ್ರೊ.ಸಾಗರ್ ಶ್ರೀನಿವಾಸ್ ವಂದಿಸಿದರು. ಕಾರ್ಯಕ್ರಮವನ್ನು ಪ್ರೊ.ಯಶಸ್ವಿ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top