ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಂದ ಬಾಂಗ್ಲಾದೇಶದ ಮತಾಂಧರ ಅಟ್ಟಹಾಸಕ್ಕೆ ಬಲಿಯಾದ ಹಿಂದೂ ಬಾಂಧವರ ದಯನೀಯ ಸ್ಥಿತಿಗಾಗಿ ಅಶ್ರು ತರ್ಪಣ, ಮೌನ ಪ್ರಾರ್ಥನೆ ನಡೆಯಿತು. ಹಿಂದೂಗಳ ವಿರುದ್ಧದ ಅತ್ಯಾಚಾರ, ಅನಾಚಾರ, ಆಕ್ರಮಣ, ಅಮಾನವೀಯ ಹಿಂಸಾತ್ಮಕ ಚಟುವಟಿಕೆಗಳ ವಿರುದ್ಧವಾಗಿ ಪ್ರತಿಭಟನೆ ನಡೆಯಿತು. ಈ ಸಂದರ್ಬದಲ್ಲಿ ಹಿಂದೂ ವಿರೋಧಿ ದುಷ್ಟ ಶಕ್ತಿಗಳ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ನಮ್ಮ ದೇಶದ ಪ್ರಧಾನ ಮಂತ್ರಿಯವರಿಗೆ ಬಾಂಗ್ಲಾದ ಹಿಂದೂಗಳ ಹಿತರಕ್ಷಣೆಗಾಗಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪತ್ರಬರೆಯುವ ನಿರ್ಣಯ ಕೈಗೊಳ್ಳಲಾಯಿತು.
ವಿದ್ಯಾರ್ಥಿ ನಾಯಕ ಪವನ್ ಭಾರದ್ವಾಜ ಅವರ ನೇತೃತ್ವದಲ್ಲಿ ಶುಕ್ರವಾರದಂದು ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಉಪನ್ಯಾಸಕ ಆದರ್ಶ ಗೋಖಲೆ ಬಾಂಗ್ಲಾದೇಶದಲ್ಲಿ ಆಗುತ್ತಿರುವ ಅನ್ಯಾಯ ಮುಂದೊಂದು ದಿನ ನಮ್ಮ ಭಾರತದಲ್ಲಿ ಆಗದಂತೆ ಜಾಗೃತರಾಗಿರಬೇಕು. ಪ್ರಪಂಚದಾದ್ಯಂತ ಇರುವ ಯಾವೊಬ್ಬ ಹಿಂದುವಿನ ಕೂದಲೂ ಕೊಂಕದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಇದಕ್ಕಾಗಿ ಎಲ್ಲರೂ ಒಂದಾಗಬೇಕು ಎಂದರು. ವಿದ್ಯಾರ್ಥಿನಿ ಪೂರ್ವಿ ಸ್ವಾಗತಿಸಿದರು. ವಿದ್ಯಾರ್ಥಿ ವಿಕಾಸ್ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ