ಸುರತ್ಕಲ್: ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಸುರತ್ಕಲ್ ನ ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಜರಗಿತು. ಧ್ವಜಾರೋಹಣವನ್ನು ಶಾಲಾ ಹಳೆ ವಿದ್ಯಾರ್ಥಿನಿ ಹಾಗೂ ಕುಲಾಲ್ ಪ್ರತಿಷ್ಠಾನ ಮಂಗಳೂರು ಇದರ ಮುಖ್ಯಸ್ಥರಾದ ಶ್ರೀಮತಿ ಮಮತಾ ಅಣ್ಣಯ್ಯ ಕುಲಾಲ್ ನೆರವೇರಿಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಬಾಲಚಂದ್ರ ಕೆ. ಮಕ್ಕಳಿಗೆ ಸ್ವಾತಂತ್ಸ್ಯೋತ್ಸವದ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಸುರತ್ಕಲ್ ಕೆನರಾ ಬ್ಯಾಂಕ್ ಇಲ್ಲಿನ ಮುಖ್ಯ ವ್ಯವಸ್ಥಾಪಕರಾದ ವಿಜಯ್ ಕುಮಾರ್ ದೀಕ್ಷಿತ್ ಮತ್ತು ಅಲ್ಲಿನ ಸಿಬ್ಬಂದಿಗಳು, ಮತ್ತು ಹಿಂದು ವಿದ್ಯಾದಾಯಿನೀ ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿ, ಹಾಗೂ ಶಾಲಾ ಸಂಚಾಲಕ ಸುಧಾಕರ ರಾವ್ ಪೇಜಾವರ್, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು, ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಅಂತಿಮವಾಗಿ ಶಾಲಾ ಮಕ್ಕಳಿಂದ ಸ್ವಾತಂತ್ರ್ಯದ ಸಂದೇಶ ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ