ಶ್ರೀ ಭಗವತಿ ದೇವಸ್ಥಾನದಲ್ಲಿ ಸ್ವರ ಸಿಂಚನ- ಭಕ್ತಿ ಗಾನ ಸಂಗೀತ ಕಾರ್ಯಕ್ರಮ

Upayuktha
0

ಪೆರ್ನಾಜೆ: "ಸ್ವರಸಿಂಚನ" ಸಂಗೀತ ಶಾಲೆ ವಿಟ್ಲ ಮತ್ತು ಪಡಿಬಾಗಿಲು ಶಾಖೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನ ಪೂಜಾ ಕಾರ್ಯಕ್ರಮದ ಪ್ರಯುಕ್ತ ದೇವಸ್ಥಾನದ ಸಭಾಂಗಣದಲ್ಲಿ ಅಗಸ್ಟ್ 25ರಂದು ಭಕ್ತಿ ಗಾನ ಸಂಗೀತ ಕಾರ್ಯಕ್ರಮ ನಡೆಯಿತು.


ದೇಗುಲದ ವ್ಯವಸ್ಥಾಪಕರಾದ ಕೇಶವ ಆರ್ ವಿ ದೀಪ ಪ್ರಜ್ವಲನೆ ಮಾಡಿ ಗೀತ ಶಿಕ್ಷಕಿಯ ಮಾರ್ಗದರ್ಶನದಲ್ಲಿ ಉತ್ತಮ ರೀತಿಯಲ್ಲಿ ವೈವಿಧ್ಯಮಯ ವಿನ್ಯಾಸದಲ್ಲಿ ಸುಂದರ ಹಾಡುಗಳ ಜೋಡಣೆಯಲ್ಲಿ ಪ್ರತಿಭೆಗಳು ಹೊರ ಹೊಮ್ಮುತ್ತಿದ್ದಾರೆ. ಇದನ್ನು ಕಂಡಾಗ ಮನ ತುಂಬಿ ಬರುತ್ತದೆ. ಈ ವಿದ್ಯಾರ್ಥಿಗಳಿಗೆ ಮುಂದೆ ಉತ್ತಮ ಭವಿಷ್ಯ ಇದೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.


ವಿಠಲ ಬಾಲಿಕ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ. ಕೃಷ್ಣ ಭಟ್, ಗೋಪಾಲಕೃಷ್ಣ ನಾಯಕ್ ಪಾಡಿಬಾಗಿಲು, ವಿಟ್ಲ ಸುಪ್ರ ಜೀತ್ ಐಟಿಐ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ರಘುರಾಮ ಶಾಸ್ತ್ರಿ ಕೋಡಂದೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಸಿಂಚನ ಲಕ್ಷ್ಮಿ ಕೋಡಂದೂರು ಪ್ರಾರ್ಥನೆ ಮಾಡಿದರು.


ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರು ಸ್ವಾಗತಿಸಿದರು. ಪದ್ಮರಾಜ್ ಚಾರ್ವಾಕ ವಂದಿಸಿ ಕಾರ್ಯಕ್ರಮ ನಿರೂಪಿಸಿದರು. ಪಕ್ಕವಾದ್ಯದಲ್ಲಿ ಅಮ್ಮು ಮಾಸ್ಟರ್ ಕಾಸರಗೋಡು ಕೀಬೋರ್ಡ್ ನಲ್ಲಿ ತಮ್ಮ ಕೈಚಳಕವನ್ನು ಪ್ರದರ್ಶಿಸಿದರು. ರಿದಂಪ್ಯಾಡ್ನಲ್ಲಿ ಸುಹಾಸ್ ಹೆಬ್ಬಾರ್ ಪುತ್ತೂರು, ಕೊಳಲು ವಾದಕರಾಗಿ ಸುರೇಂದ್ರ ಆಚಾರ್ಯ ಕಾಸರಗೋಡು ಸಹಕರಿಸಿದರು.


ಸುಂದರ ಕಾರ್ಯಕ್ರಮದ ವೈಭವಕ್ಕೆ ಕಿಕ್ಕಿರಿದು ತುಂಬಿದ ಸಭಾಂಗಣವೇ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿತ್ತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top