ಉಡುಪಿ: ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಚಾಲನೆ

Upayuktha
0



ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನ್ಯೂ ಸಿಟಿ ಸ್ಕೂಲ್ ಆಂಡ್ ಕಾಲೇಜ್ ಆಫ್ ನರ್ಸಿಂಗ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುರುವಾರ ನಗರದ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಜಿಲ್ಲಾ ಸರ್ಜನ್ ಡಾ.ಅಶೋಕ್ ಹೆಚ್ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಮಾತನಾಡಿ, ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಠಿಯಿಂದ ಬಹುಮುಖ್ಯ. ಸ್ತನ್ಯಪಾನದಿಂದ ಪ್ರತೀವರ್ಷ ವಿಶ್ವದಾದ್ಯಂತ 8 ಲಕ್ಷ ಮಕ್ಕಳ ಜೀವ ಉಳಿಸಲು ಸಾಧ್ಯತೆ ಇದ್ದು, ಮಕ್ಕಳಲ್ಲಿ ರೋಗನಿರೊಧಕ ಶಕ್ತಿ ಹೆಚ್ಚಿಸಲು ಸ್ತನ್ಯಪಾನ ಅವಶ್ಯಕ ಎಂದರು.


ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಅಮರ್‌ನಾಥ್ ಶಾಸ್ತ್ರಿ ಉಪನ್ಯಾಸ ನೀಡಿ ಮಾತನಾಡುತ್ತಾ, ಮೊದಲ ಮೂರು ದಿನ ಬರುವ ಕೊಲೋಸ್ಟ್ರೋಮ್ ಮಗುವಿಗೆ ನೀಡಲೇಬೇಕು. ಮೊದಲು ಬರುವ ಹಳದಿ ವರ್ಣದ ಕೊಲೋಸ್ಟ್ರೋಮ್‌ನಲ್ಲಿ ಪೌಷ್ಠಿಕಾಂಶ ಉತ್ಕೃಷ್ಠವಾಗಿದ್ದು ಮಕ್ಕಳ ಬೆಳವಣಿಗೆಗೆ ಉತ್ತಮವಾಗಿದೆ ಎಂದರು.


ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಜ್ಯೋತ್ಸ್ನಾ.ಬಿ.ಕೆ, ಪ್ರಾಸ್ತಾವಿಕವಾಗಿ ಮಾತನಾಡಿದರು. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜ್ ಗೋಪಾಲ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಆಸ್ಪತ್ರೆಯ ಶುಶ್ರೂಷಣಾ ಅಧೀಕ್ಷಕಿ ಅರುಣ ಪ್ರತಿಜ್ಞಾವಿಧಿ ಭೋಧಿಸಿದರು.


ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಪ್ರಸೂತಿ ತಜ್ಞೆ ಡಾ.ಉಷಾ ಭಟ್, ಮಕ್ಕಳ ತಜ್ಞ ಡಾ.ಸಂದೀಪ್, ಡಾ.ಮಹಾದೇವ್ ಭಟ್, ಅರವಳಿಕೆ ತಜ್ಞ ಡಾ.ಗಣಪತಿ ಹೆಗ್ಡೆ, ನ್ಯೂಸಿಟಿ ಕಾಲೇಜಿನ ಪ್ರಾಧ್ಯಾಪಕ ಸೋನಿ ಸುಪ್ರಿಯ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರೀತಮ್ ಬಿ.ಕೆ, ಡಿಪಿಸಿ ಸುಧೀಂದ್ರ, ಐ.ಎಫ್.ವಿ ಹರ್ಷ, ದೀಪಶ್ರೀ, ಆರೋಗ್ಯ ಸುರಕ್ಷಾಧಿಕಾರಿ ಪ್ರತಿಮಾ, ಆಸ್ಪತ್ರೆಯ ಸಿಬ್ಬಂದಿಗಳು, ಗರ್ಭಿಣಿಯರು, ಬಾಣಂತಿಯರು, ಮಕ್ಕಳ ತಾಯಂದಿರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್ ಸ್ವಾಗತಿಸಿ, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿದರೆ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ವಂದಿಸಿದರು. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top