ಉಡುಪಿ: ಸ್ಟೆಲ್ಲಾ ಮಾರಿಸ್ ದೇವಾಲಯ ಕಲ್ಮಾಡಿ ಇಲ್ಲಿರುವ ವೆಲಂಕಣಿ ಮಾತೆಯ ಕೇಂದ್ರದ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು 15 ಅಗಸ್ಟ್ 2024 ಗುರುವಾರ ನಡೆಯಲಿದೆ.
ವಾರ್ಷಿಕ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಒಂಬತ್ತು ದಿನಗಳ ನವೇನಾ ಪ್ರಾರ್ಥನೆಗಳು ಆ.6ರಿಂದ 14ರ ವರೆಗೆ ಸಾಯಂಕಾಲ 4:00 ಗಂಟೆಗೆ ನಡೆಯಲಿರುವುದು.
ಆ.6ರಂದು ಮಂಗಳವಾರ ಸಾಯಂಕಾಲ 3:45 ಗಂಟೆಗೆ ಮಂಗಳೂರು ಧರ್ಮಪ್ರಾಂತ್ಯದ ವಿಕಾರ್ ಜೆರಾಲ್ ಆಗಿರುವ ಮೊನ್ಸಿ. ಲಾರೆನ್ಸ್ ಮ್ಯಾಕ್ಸಿಮ್ ನೊರೋನ್ಹಾ ರವರು ಪುಣ್ಯಕ್ಷೇತ್ರದ ಬಾವುಟವನ್ನು ಹಾರಿಸುವ ಮೂಲಕ ನವೇನಾ ಪ್ರಾರ್ಥನೆಗಳಿಗೆ ಚಾಲನೆ ನೀಡಲಿರುವರು.
ಆ.11ರಂದು ಭಾನುವಾರ ಮಧ್ಯಾಹ್ನ 2:30 ಗಂಟೆಗೆ ಕಲ್ಮಾಡಿ ಸೇತುವೆಯಿಂದ ಕಲ್ಮಾಡಿ ದೇವಾಲಯದ ವರೆಗೆ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ನಡೆಯಲಿರುವುದು. ಅಂದು ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷ ಅತೀ ವಂದನೀಯ ಡಾ. ಲುವಿಸ್ ಪಾವ್ಲ್ ಡಿʼಸೋಜಾ ರವರು ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ಚಾಲನೆ ನೀಡಲಿರುವರು.
15 ಅಗಸ್ಟ್ 2024 ಗುರುವಾರ ಬೆಳಗ್ಗೆ 10:30 ಗಂಟೆಗೆ ದಿವ್ಯ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೋ ರವರು ನೆರೆವೇರಿಸಲಿರುವರು. ಉಡುಪಿ ಧರ್ಮಪ್ರಾಂತ್ಯದ ಅನೇಕ ಧರ್ಮಗುರುಗಳು ಹಾಗೂ ಸಾವಿರಾರು ಭಕ್ತಾದಿಗಳು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವರು. ಅಂದು ಬೆಳಗ್ಗೆ 7:30 ಹಾಗೂ ಸಾಯಂಕಾಲ 4:00 ಗಂಟೆಗೆ ಕೊಂಕಣಿ ಭಾಷೆಯಲ್ಲಿ ಹಾಗೂ ಸಾಯಂಕಾಲ 6:00 ಗಂಟೆಗೆ ಇಂಗ್ಲಿಷ್ ಭಾಷೆಯಲ್ಲಿ ಇತರೆ ಬಲಿಪೂಜೆಗಳನ್ನು ಆಯೋಜಿಸಲಾಗಿದೆ.
ವೆಲಂಕಣಿ ಮಾತೆಯ ಕೇಂದ್ರವನ್ನು 15 ಅಗಸ್ಟ್ 2022 ರಂದು ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಲೋ ರವರು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವಾಗಿ ಘೋಷಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ