ಉಜಿರೆ:ಇಕೋ-ಕ್ಲಬ್ ವತಿಯಿಂದ ನೇಜಿ ನಾಟಿ ಕಾರ್ಯಕ್ರಮ

Chandrashekhara Kulamarva
0


ಉಜಿರೆ:
ಉಜಿರೆಯ ಶ್ರೀ ಧ. ಮಂ. ಸ್ವಾಯತ್ತ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಸಕ್ರಿಯ ಸಂಘಗಳಾದ ಸಸ್ಯಸೌರಭ ಹಾಗೂ ಇಕೋ-ಕ್ಲಬ್ ವತಿಯಿಂದ ಉಜಿರೆಯ ರತ್ನಮಾನಸದಲ್ಲಿ ನೇಜಿ ನೆಡುವ ಕಾರ್ಯಕ್ರಮ ನಡೆಯಿತು. ರತ್ನಮಾನಸದ ಮೇಲ್ವಿಚಾರಕ ಯತೀಶ್ ಬಳಂಜ ಇವರು ನೇಜಿ ನೆಡುವ ವಿಧಾನ ಹಾಗೂ ಮಾಹಿತಿಗಳನ್ನು ನೀಡಿದರು. ದ್ವಿತೀಯ ಮತ್ತು ತೃತೀಯ ಬಿ.ಎಸ್ಸಿಯ ಸುಮಾರು 40 ವಿದ್ಯಾರ್ಥಿಗಳು ಉತ್ಸಾಹದಿಂದ ಜೊತೆಗೂಡಿ ನೇಜಿ ನಾಟಿ ಮಾಡಿ ಸಂಭ್ರಮಿಸಿದರು. 


ಕಾರ್ಯಕ್ರಮದಲ್ಲಿ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶಕುಂತಲಾ ಬಿ., ಅಭಿಲಾಷ್ ಕೆ.ಎಸ್., ಮಂಜುಶ್ರೀ ಹಾಗೂ ಭವ್ಯ ಡಿ. ನಾಯಕ್ ಪಾಲ್ಗೊಂಡರು. ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಇವರು ಶುಭ ಹಾರೈಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top