ಪುತ್ತೂರು: ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ವಿರೋಧಿಸಿ ಹಾಗೂ ಸಮಾಜದಲ್ಲಿ ರಾಷ್ಟ್ರೀಯ ಜಾಗೃತಿಯನ್ನು ಮೂಡಿಸಲು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ) ಇದರ ವತಿಯಿಂದ ನಡೆಸಲ್ಪಡುವ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಒಟ್ಟುಗೂಡಿ ಮಾನವ ಸರಪಳಿ ಜಾಥಾ ಇಂದು ತೆಂಕಿಲದ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಇದರ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೆಹರೂ ನಗರದಲ್ಲಿರುವ ವಿವೇಕಾನಂದ ಕಾಲೇಜಿನ ಆವರಣದಿಂದ ವಿದ್ಯಾರ್ಥಿಗಳು ಮಾನವ ಸರಪಳಿಯ ಮೂಲಕ ಹೊರಟು ವಿವೇಕನಗರದ ತೆಂಕಿಲದಲ್ಲಿ ಇರುವ ವಿವೇಕಾನಂದ ಶಾಲಾ ಆವರಣದಲ್ಲಿ ಒಟ್ಟಾಗಿ ಜನ ಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮ ನಡೆಯಲಿದೆ.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಿದ್ದಾರೆ ಹಾಗೂ ಈ ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುವ ವಿವಿಧ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಹಾಗೂ ಸುಮಾರು ಹತ್ತು ಸಾವಿರ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ