ವೀರಾಜಪೇಟೆ: ಹಿಂ.ಜಾ.ವೇ. ಯಿಂದ ಅಖಂಡ ಭಾರತ ಸಂಕಲ್ಪ ದಿನ, ಬೃಹತ್ ಪಂಜಿನ ಮೆರವಣಿಗೆ

Upayuktha
0

                        

ವಿರಾಜಪೇಟೆ: 1947 ರಲ್ಲಿ ಅಖಂಡ ಭಾರತವನ್ನು ತ್ರಿಖಂಡವಾಗಿ ತುಂಡರಿಸಲು ಕಾರಣವಾದ ಅಂದಿನ ನೈಜ ಘಟನೆಗಳನ್ನು ಯುವ ಸಮೂಹಕ್ಕೆ ನೆನಪಿಸುವುದು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರ ಸ್ಮರಣೆ ಮಾಡುವುದು ಹಾಗೂ ಕಳೆದು ಹೋದ ಭಾರತದ ಭೂಭಾಗಗಳನ್ನು ಮತ್ತೆ ಪಡೆಯುವ ಸಂಕಲ್ಪದೊಂದಿಗೆ ಹಿಂದು ಜಾಗರಣ ವೇದಿಕೆಯು ಪ್ರತೀ ವರ್ಷ ಆಗಸ್ಟ್ ತಿಂಗಳಿನಲ್ಲಿ ಅಖಂಡ ಭಾರತ ಸಂಕಲ್ಪ ದಿನವನ್ನು ಆಯೋಜಿಲಾಯಿತು.


ಈ ಪ್ರಯುಕ್ತ ವೀರಾಜಪೇಟೆಯಲ್ಲಿಂದು ನಡೆದ ಅಖಂಡ ಭಾರತ ಸಂಕಲ್ಪದಿನ ಕಾರ್ಯಕ್ರಮದ ಸಭಾ ಅಧ್ಯಕ್ಷತೆವಹಿಸಿದ ನಿವೃತ್ತ ಕರ್ನಲ್ ಕೆ.ಸಿ. ಸುಬ್ಬಯ್ಯರವರು, ದಿಕ್ಸೂಚಿ ಭಾಷಣಕಾರರಾಗಿ ಆಗಮಿಸಿದ್ದ ಸಾಮಾಜಿಕ ಕಾರ್ಯಕರ್ತ ಚಿ.ನಾ. ಸೋಮೇಶ್ ರವರು ಅಖಂಡ ಭಾರತ ಸಂಕಲ್ಪ ದಿನದ ಮಹತ್ವ ಹಾಗೂ ಸಮಾಜದಲ್ಲಿ ಇಂದಿನ ಯುವ ಪೀಳಿಗೆ ವಹಿಸಬೇಕಾದ ಪಾತ್ರದ ಬಗ್ಗೆ ವಿವರಿಸಿದರು.

 


ವೇದಿಕೆಯಲ್ಲಿ ಹಿಂ.ಜಾ.ವೇ.ಜಿಲ್ಲಾ ಸಹ ಸಂಯೋಜಕರಾದ ಅಲುಮಾಡ ಶರತ್ ತಾಲ್ಲೂಕು ಸಂಯೋಜಕರಾದ ರವೀಂದ್ರ ಪೂಜಾರಿ ಉಪಸ್ಥಿತರಿದ್ದರು.ಹಿಂ.ಜಾ.ವೇ, ಆರ್.ಎಸ್.ಎಸ್, ಭಾ.ಜ.ಪಾ, ವಿ.ಹೆಚ್.ಪಿ. ಸೇರಿದಂತೆ ವಿವಿಧ ಸಂಘಟನೆಗಳ ನೂರಾರು ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವೀರಾಜಪೇಟೆಯ ಮುಖ್ಯ ಬೀದಿಗಳಲ್ಲಿ ಸಾವಿರಾರು ಸಂಖ್ಯೆಯ ದೇಶಭಕ್ತರು ಪಂಜು ಹಿಡಿದು ದೇಶಭಕ್ತಿಯ ಘೋಷಣೆಗಳೊಂದಿಗೆ ಪಂಜಿನ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top