ಪುತ್ತೂರು:ವಿವೇಕಾನಂದ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ಮಾಹಿತಿ ಕಾರ್ಯಾಗಾರ

Chandrashekhara Kulamarva
0


ಪುತ್ತೂರು:
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅನುಕೂಲವಾಗುವಂತಹ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಫುಲ್ಲಾ ಗಣೇಶ್‌, ಐ. ಆರ್‌. ಸಿ. ಎಂ. ಡಿ ಎಜುಕೇಷನಲ್‌ ಸೆಂಟರ್‌, ಪುತ್ತೂರು ಇವರು ಆಗಮಿಸಿ ವಿದ್ಯಾರ್ಥಿಗಳಿಗೆ “ಟ್ರಿಕ್ಸ್ ಇನ್‌ ಪ್ರೋಬ್ಲೆಮ್‌ ಸೋಲ್ವಿಂಗ್”‌ ವಿಷಯದ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ  ವಿಜ್ಞಾನ ವಿಭಾಗದ ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಉಪನ್ಯಾಸಕಿ ಮಮತಾ ಶೆಟ್ಟಿ ಸ್ವಾಗತಿಸಿ,ನಿರೂಪಿಸಿ,ವಂದಿಸಿದರು. 


Post a Comment

0 Comments
Post a Comment (0)
To Top