ಪುತ್ತೂರು:ಕಬಡ್ಡಿ ಪಂದ್ಯಾಟ- ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ

Upayuktha
0


ಪುತ್ತೂರು:ಕರ್ನಾಟಕ ಪಬ್ಲಿಕ್‌ ಪಿ.ಯು ಕಾಲೇಜು, ಹಾಸನ ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಪ್ರಾಂತ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ. 

ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಆದ್ಯಾ ಬಿ.ಆರ್‌, ವರ್ಷ.ಕೆ, ಯಜ್ಞಾ, ವೀಕ್ಷಾ ಪಿ, ಶ್ರಾವ್ಯಾ ಯು, ಗ್ರೀಷ್ಮಾ ಎಸ್. ಎ, ತ್ರಿಶಾಲಿ ಕೆ.ಆರ್‌, ರಕ್ಷಾ ಎ.ಎಲ್ ಹಾಗೂ ದ್ವಿತೀಯ ಪಿಯುಸಿಯ ಕಾರ್ತಿಕಾ, ಧನುಶ್ರೀ ಹಾಗೂ ತ್ರಿಶಾ, ಪ್ರಣತಿ ಭಾಗವಹಿಸಿದ್ದರು. ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top